Karnataka Bhagya
ಕರ್ನಾಟಕ

ಕಂದಾಯ, ಲೋಕೋಪಯೋಗಿ, ಗಣಿ ಮತ್ತು ಭೂ ವಿಜ್ಞಾನ, ಆರ್‌ಟಿಓ, ಪರಿಸರ ನಿಯಂತ್ರಣ ಮಂಡಳಿ ಹೀಗೆ ಎಲ್ಲಾ ಇಲಾಖೆ ಅಧಿಕಾರಿಗಳು ಸಂಘಟಿತವಾಗಿ ಗಸ್ತು ಮಾಡುವ ಮೂಲಕ ಅಕ್ರಮ ಮರಳು ಗಣಿಗಾರಿಕೆ ನಿಯಂತ್ರಣ, ಸಾಗಟದ ನಿಯಂತ್ರಣಕ್ಕೆ ಮುಂದಾಗಲು ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಸೂಚನೆ

ಕಂದಾಯ, ಲೋಕೋಪಯೋಗಿ, ಗಣಿ ಮತ್ತು ಭೂ ವಿಜ್ಞಾನ, ಆರ್‌ಟಿಓ, ಪರಿಸರ ನಿಯಂತ್ರಣ ಮಂಡಳಿ ಹೀಗೆ ಎಲ್ಲಾ ಇಲಾಖೆ ಅಧಿಕಾರಿಗಳು ಸಂಘಟಿತವಾಗಿ ಗಸ್ತು ಮಾಡುವ ಮೂಲಕ ಅಕ್ರಮ ಮರಳು ಗಣಿಗಾರಿಕೆ ನಿಯಂತ್ರಣ, ಸಾಗಟದ ನಿಯಂತ್ರಣಕ್ಕೆ ಮುಂದಾಗಲು ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಸೂಚನೆ

ಮರಳು ದಂಧೆ ನಿಯಂತ್ರಿಸಿ

ಕರ್ನಾಟಕ ಭಾಗ್ಯ ವಾರ್ತೆ

ಯಾದಗಿರಿ : ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ಕಂಡುಬAದರೆ ಮತ್ತು  ದೂರುಗಳು ಬಂದರೆ  ತಕ್ಷಣ ಎಫ್‌ಐಆರ್ ದಾಖಲಿಸಿ ಕ್ರಮ ಕೈಗೊಂಡು ಸಂಬAಧಿಸಿದ ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ ಅಕ್ರಮ ಮರಳು ದಂಧೆ ನಿಯಂತ್ರಿಸಬೇಕು ಎಂದು ಸಂಬAಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಸುಶೀಲ ಬಿ. ಅವರು ಖಡಕ್  ಸೂಚನೆ ನೀಡಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ಮರಳು ಮಾನಿಟರಿಂಗ್ ನಿಯಂತ್ರಣ ಸಮಿತಿ ಸಭೆ ನಡೆಸಿ ಅವರು ಮಾತನಾಡಿದರು.

ಕಂದಾಯ, ಲೋಕೋಪಯೋಗಿ, ಗಣಿ ಮತ್ತು ಭೂ ವಿಜ್ಞಾನ, ಆರ್‌ಟಿಓ, ಪರಿಸರ ನಿಯಂತ್ರಣ ಮಂಡಳಿ ಹೀಗೆ ಎಲ್ಲಾ ಇಲಾಖೆ ಅಧಿಕಾರಿಗಳು ಸಂಘಟಿತವಾಗಿ ಗಸ್ತು ಮಾಡುವ ಮೂಲಕ ಅಕ್ರಮ ಮರಳು ಗಣಿಗಾರಿಕೆ ನಿಯಂತ್ರಣ, ಸಾಗಟದ ನಿಯಂತ್ರಣಕ್ಕೆ ಮುಂದಾಗಬೇಕು.

ದAಡ ಹಾಕಿದರೆ ಅದರ ಪರಿಣಾಮ ಹೇಗಿರಬೇಕು ಎಂದರೆ ಇನ್ನೊಂದು ಸಾರಿ ಅಕ್ರಮ ಮರಳು ಸಾಗಣಿಕೆಗೆ ಮುಂದಾಗಿರಬಾರದು ಆ ನಿಟ್ಟಿನಲ್ಲಿ ಮುಲಾಜು ಇಲ್ಲದೆ ದುಪ್ಪಟ್ಟು ದಂಡ ವಿಧಿಸಿ ಎಂದು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು.

ಅಕ್ರಮವಾಗಿ ಮರಳು ಸಂಗ್ರಹಿಸಿಟ್ಟುಕೊAಡರೆ ಆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು. ತಹಶೀಲ್ದಾರು ಮತ್ತು ಪೊಲೀಸ್ ಸಿಬ್ಬಂದಿಗಳು ಕ್ರಮಕ್ಕೆ ಮುಂದಾಗಬೇಕು. ಜಿಲ್ಲೆಯಲ್ಲಿ ಅಕ್ರಮ ಮರಳು ಕುರಿತಂತೆ ಸಾರ್ವಜನಿಕರಿಂದ ನಿತ್ಯ ದೂರುಗಳು ಬರುತ್ತಿವೆ .  ಅಧಿಕಾರಿಗಳು ಸಮಪರ್ಕವಾಗಿ ನಿರ್ವಹಣೆ ಮಾಡಿ ಕಾನೂನಿನ ಚೌಕಟ್ಟಿನೊಳಗೆ ಕಾರ್ಯ ನಿರ್ವಹಿಸಬೇಕು. ನಿರ್ಲಕ್ಷö್ಯ ವಹಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಅಕ್ರಮ ಸಾಗಾಟದಲ್ಲಿ ಭಾಗಿಯಾಗುವ ವಾಹನಗಳನ್ನು ಆರ್‌ಟಿಓ ಮತ್ತು ಸಂಬAಧಿಸಿದ  ಅಧಿಕಾರಿಗಳು ಸೀಜ್ ಮಾಡಬೇಕು. ರಾಯಲ್ಟಿಕ್ಕಿಂತ ಹೆಚ್ಚಿನ ಟ್ರಿಪ್ ಸಾಗಾಣಿಕೆಯಾಗದಂತೆ ನಿಗಾ ವಹಿಸಬೇಕು. ಜಿಪಿಎಸ್ ಅಳವಡಿಸಿಕೊಂಡಿರುವ ಲಾರಿಗಳಿಗೆ ಮಾತ್ರ ಮರಳು ಸಾಗಣೆಗೆ ಪರ್ಮೀಟ್ ಕೊಟ್ಟು, ಅಕ್ರಮವಾಗಿ ಸಾಗಣೆ ಮಾಡಿ ನಿಯಮ ಉಲ್ಲಂಘಿಸುವ ಲಾರಿಗಳನ್ನು ಪತ್ತೆ ಹಚ್ಚಿ ವಶಕ್ಕೆ ತೆಗೆದುಕೊಂಡು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ತಾಲೂಕು ಹಂತದಲ್ಲಿ ಸಮಿತಿ ರಚಸಿ : ಜಿಲ್ಲೆಯ ಎಲ್ಲಾ ಚೆಕ್‌ಪೋಸ್ಟ್ಗಳಲ್ಲಿ ತಪಾಸಣೆ ಚುರುಕುಗೊಳಿಸಬೇಕು. ಪರವಾನಿಗೆ, ರಾಯಲ್ಟಿ ಸೇರಿದಂತೆ ಇನ್ನಿತರ ದಾಖಲೆಗಳನ್ನು ತಪಾಸಣೆ ಮಾಡಬೇಕು. ಅತಿಭಾರದೊಂದಿಗೆ ಸಾಗುವ ವಾಹನಗಳಿಗೆ ದಂಡ ಹಾಕುವುದಲ್ಲದೇ ಎಫ್‌ಐಆರ್ ದಾಖಲಿಸಬೇಕು. ಇನ್ನು ತಾಲೂಕು ಹಂತದಲ್ಲಿಯೂ ಮರಳು ಮಾನಿಟರಿಂಗ್ ನಿಯಂತ್ರಣ ಸಮಿತಿ ಸಭೆ ನಡೆಸಬೇಕು. ಸಹಾಯಕ ಆಯುಕ್ತರ ಸಮಿತಿ ಅಕ್ರಮ ಗಣಿಗಾರಿಕೆ ನಿಯಂತ್ರಣಕ್ಕೆ ನಿಗಾ ವಹಿಸಬೇಕು ಎಂದರು.

ಜಿಲ್ಲೆಯಲ್ಲಿ ಅನಧಿಕೃತ ಮರಳು ಸಾಗಣೆ ನಡೆದಿರುವ ಜನವರಿ ತಿಂಗಳಿAದ ಏಪ್ರಿಲ್ ವರೆಗೆ ೨೯ ಎಫ್.ಐ.ಆರ್ ದಾಖಲಿಸಿ ಒಟ್ಟು ೧೦,೬೬,೦೨೦ ಲಕ್ಷ ರೂ.ಗಳ ದಂಡ ವಸೂಲಿ ಮಾಡಲಾಗಿದೆ ಎಂದು ಸಂಬAಧಿಸಿದ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಸಂಗೀತ, ಅರಣ್ಯ ಸಂರಕ್ಷಣಾಧಿಕಾರಿ ಕಾಲೋಜ್ ಪಾಟೀಲ, ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಸಹಾಯಕ ಆಯುಕ್ತ ಪ್ರಕಾಶ ಕುದರಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಪೂರ್ಣಿಮಾಸಿ ಸೇರಿದಂತೆ ಆರ್.ಟಿ.ಓ ಅಧಿಕಾರಿಗಳು, ಎಲ್ಲಾ ತಾಲೂಕಿನ ತಹಶಿಲ್ದಾರರು ಹಾಗೂ ಸಂಬAಧಿಸಿದ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಕಂದಾಯ, ಲೋಕೋಪಯೋಗಿ, ಗಣಿ ಮತ್ತು ಭೂ ವಿಜ್ಞಾನ, ಆರ್‌ಟಿಓ, ಪರಿಸರ ನಿಯಂತ್ರಣ ಮಂಡಳಿ ಹೀಗೆ ಎಲ್ಲಾ ಇಲಾಖೆ ಅಧಿಕಾರಿಗಳು ಸಂಘಟಿತವಾಗಿ ಗಸ್ತು ಮಾಡುವ ಮೂಲಕ ಅಕ್ರಮ ಮರಳು ಗಣಿಗಾರಿಕೆ ನಿಯಂತ್ರಣ, ಸಾಗಟದ ನಿಯಂತ್ರಣಕ್ಕೆ ಮುಂದಾಗಲು ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಸೂಚನೆ

Related posts

ರಾಕಿಂಗ್ ಸ್ಟಾರ್ ಗೆ ಪೂಜಾ ಹೆಗ್ಡೆ ನಾಯಕಿ??

Nikita Agrawal

ಬರ್ತ್ ಡೇ ಬಾಯ್ ಡಾರ್ಲಿಂಗ್ ಕೃಷ್ಣ ಅವರ ಮುಂದಿನ ಸಿನಿಮಾಗಳು.

Nikita Agrawal

ನವರಸ ನಾಯಕನಿಂದ ಪ್ರಶಂಸೆ ಪಡೆದ ರಕ್ಷಿತ್ ಶೆಟ್ಟಿ…

Nikita Agrawal

Leave a Comment

Share via
Copy link
Powered by Social Snap