Karnataka Bhagya

ಕರ್ನಾಟಕ ರಕ್ಷಣಾ ವೇದಿಕೆ ಯಾದಗಿರಿ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಕಸಾಪ ಆವರಣದಲ್ಲಿ ಕಾರ್ಯಕ್ರಮ

ಏ.25ರಂದು ಪ್ರತಿಭಾ ಪುರಸ್ಕಾರ ಸಮಾರಂಭ

ಕರ್ನಾಟಕ ಭಾಗ್ಯ ವಾರ್ತೆ

ಯಾದಗಿರಿ : ಕರವೇ ಕೇವಲ ನಾಡುನುಡಿ ನೆಲ ಜನ ರಕ್ಷಣೆಗೆ ಹೋರಾಟ ಮಾಡುವುದಷ್ಟೇ ಅಲ್ಲ ನಾಡಿನಲ್ಲಿ ಸಾಧನೆ ಮಾಡಿದವರನ್ನು ಗುರ್ತಿಸಿ ಗೌರವಿಸುವ ಪ್ರತಿಭೆಗೆ ಪ್ರೋತ್ಸಾಹಿಸುವ ಕೆಲಸವನ್ನು ಮಾಡುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಪಿಯುಸಿಯಲ್ಲಿ ಅತಿಹೆಚ್ಚು ಅಂಕ ಪಡೆದು ತೇರ್ಗಡೆ ಹೊಂದಿ ಜಿಲ್ಲೆಗೆ ಕೀರ್ತಿ ತಂದ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಟಿ.ಎನ್. ಭೀಮುನಾಯಕ ತಿಳಿಸಿದರು.

ನಗರದ ಜಿಲ್ಲಾ ಕರವೇ ಕಾರ್ಯಾಲಯದಲ್ಲಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡಗಡೆ ಮಾಡಿ ಮಾತನಾಡಿದ ಅವರು, ಏ. ೨೫ರಂದು ಬೆಳಗ್ಗೆ೧೧ಕ್ಕೆ ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಭವನದ ಆವರಣದಲ್ಲಿ ನಡೆಯುವ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಗುರುಮಠಕಲ್ ಖಾಸಾಮಠದ ಶ್ರೀ ಶಾಂತವೀರ ಮಹಾಸ್ವಾಮಿಗಳು ವಹಿಸಲಿದ್ದು, ಕರವೇ ರಾಜ್ಯ ಸಂಚಾಲಕ ಸಂತೋಷ ಪಾಟೀಲ್ ಡಂಬಳ ಉದ್ಘಾಟಿಸಲಿದ್ದು, ಟಿ.ಎನ್. ಭೀಮುನಾಯಕ ಅಧ್ಯಕ್ಷತೆವಹಿಸಲಿದ್ದಾರೆ ಎಂದು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಪಿಯು ಉಪ ನಿರ್ದೇಶಕ ಚೆನ್ನಬಸಪ್ಪ ಕುಳಗೇರಿ, ಸರ್ಕಾರಿ ಪದವಿ ಕಾಲೇಜು ಪ್ರಾಚಾರ್ಯ ಡಾ. ಸುಭಾಶ್ಚಂದ್ರ ಕೌಲಗಿ, ಕಸಾಪ ಜಿಲ್ಲಾಧ್ಯಕ್ಷ ಸಿದ್ದಪ್ಪ ಹೊಟ್ಟಿ, ನಿವೃತ್ತ ಪ್ರಾಚಾರ್ಯ ವೆಂಕಟರಾವ ಕುಲಕರ್ಣಿ, ತನಾರತಿ ಸೇವಾ ಪ್ರತಿಷ್ಠಾನ ಅಧ್ಯಕ್ಷ ಡಾ. ಸಿದ್ದರಾಜರೆಡ್ಡಿ ಪಾಲ್ಗೊಳ್ಳುವರು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲ ತಾಲ್ಲೂಕು ಪದಾಧಿಕಾರಿಗಳು, ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಅವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಿದ್ದುನಾಯಕ ಹತ್ತಿಕುಣಿ, ಅಂಬ್ರೆಷ್ ಹತ್ತಿಮನಿ, ವಿದ್ಯಾರ್ಥಿ ಘಟಕದ ಜಿಲ್ಲಾಧ್ಯಕ್ಷ ವಿಶ್ವರಾಜ ಹೊನಗೇರಾ, ಸಂತೋಷ ನಿರ್ಮಲಕರ್, ಸಾಹೇಬಗೌಡ ನಾಯಕ, ಪಪ್ಪುಗೌಡ ಚಿನ್ನಾಕಾರ, ಹಣಮಂತ ಅಚ್ಚೋಲಿ  ಇನ್ನಿತರರಿದ್ದರು.

Leave a Comment

Your email address will not be published. Required fields are marked *

Scroll to Top
Share via
Copy link
Powered by Social Snap