ಜಯಂಗೆ ಲೇಡಿ ಡಾನ್ ನಯನತಾರಾ ನಾಯಕಿ.
ಪೊನ್ನಿಯಿನ್ ಸೆಲ್ವನ್ ಸಿನಿಮಾದ ಬಳಿಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಹೊರಹೊಮ್ಮಿರುವ ತಮಿಳು ನಟ ಜಯಂರವಿ ಇದೀಗ ಇರೈವನ್ ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ತಮಿಳು, ಹಿಂದಿ, ತೆಲುಗು,ಮಲಯಾಳಂ ಭಾಷೆಯಲ್ಲಿ ‘ಇರೈವನ್’ ಸಿನಿಮಾ ಮೂಡಿಬರಲಿದ್ದು ನಾಯಕನಿಗೆ ಲೇಡಿ ಸೂಪರ್ ಸ್ಟಾರ್ ನಯನತಾರಾ ಕಾಣಿಸಿಕೊಳ್ಳಲಿದ್ದಾರೆ.
ಶೂಟಿಂಗ್ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೊನೆ ಹಂತದಲ್ಲಿರುವ ಇರೈವನ್ ಸಿನಿಮಾದ ರಿಲೀಸ್ ಡೇಟ್ ಕೂಡ ಅನೌನ್ಸ್ ಆಗಿದೆ. 2024 ಆಗಸ್ಟ್ 25ಕ್ಕೆ ವರ್ಲ್ಡ್ ವೈಡ್ ಈ ಚಿತ್ರ ತೆರೆಕಾಣಲಿದೆ. ಆಕ್ಷನ್ ಥ್ರಿಲ್ಲರ್ ಇರೈವನ್ ನಲ್ಲಿ ರಾಹುಲ್ ಬೋಸೆ, ಅಶಿಶ್ ವಿದ್ಯಾರ್ಥಿ, ನರೇನ್, ವಿಜಯಲಕ್ಷ್ಮೀ, ಚಾರ್ಲಿ, ಬಗ್ಸ್ ಸೇರಿದಂತೆ ದೊಡ್ಡ ತಾರಾಬಳಗವಿದೆ. ಈ ಪ್ರಾಜೆಕ್ಟ್ ಗೆ ಐ.ಅಹಮದ್ ಆಕ್ಷನ್ ಕಟ್ ಹೇಳಿದ್ದು, ಯುವನ್ ಶಂಕರ್ ಸಂಗೀತ, ಮಣಿಕಂದನ್ ಬಾಲಾಜಿ ಸಂಕಲನ, ಸುಧನ್ ಸುಂದರಂ ಮತ್ತು ಜಯರಾಮ್.ಜಿ ನಿರ್ಮಾಣ ಮಾಡಿದ್ದಾರೆ.
ನ್ಯೂಸ್ ಡೆಸ್ಕ್ ಫಿಲ್ಮಿ ಸ್ಕೂಪ್