ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಲಘು ಹೃದಯಾಘಾತದಿಂದ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಪವರ್ ಸ್ಟಾರ್ ನಿಧನಕ್ಕೆ ಇಡೀ ಚಿತ್ರರಂಗವೇ ಕಣ್ಣೀರಿಡುತ್ತಿದೆ. ಹೃದಯಾಘಾತ ಕಾಣಿಸಿಕೊಂಡ ಹಿನ್ನೆಲೆ ಇಂದು ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದರು.
ಬೆಳ್ಳಂಬೆಳಗ್ಗೆ ಜಿಮ್‍ನಲ್ಲಿ ಕಸರತ್ತು ನಡೆಸುತ್ತಿರುವಾಗ ಲಘು ಹೃದಯಾಘಾತವಾಗಿದೆ ಎಂದು ತಿಳಿದು ಬಂದಿದೆ.