Karnataka Bhagya

ಪುರಿ ಜಗನ್ನಾಥ್ ಹಾಗೂ ರಾಮ್ ಪೋತಿನೇನಿ ಸಿನಿಮಾದ ಅಪ್ ಡೇಟ್…ಸೆಟ್ಟೇರಿದ ಡಬಲ್ ಇಸ್ಮಾರ್ಟ್….2024ರ ಶಿವರಾತ್ರಿಗೆ ಚಿತ್ರ ರಿಲೀಸ್.

ಉಸ್ತಾದ್ ರಾಮ್ ಪೋತಿನೇನಿ ಹಾಗೂ ಸೆನ್ಸೇಷನಲ್ ಡೈರೆಕ್ಟರ್ ಪುರಿ ಜಗನ್ನಾಥ್ ಮತ್ತೊಮ್ಮೆ ಒಂದಾಗಿರುವುದು ಗೊತ್ತೇ ಇದೆ. ಇಸ್ಮಾರ್ಟ್ ಶಂಕರ್ ಸಿನಿಮಾ ಮೂಲಕ ಮೋಡಿ ಮಾಡಿದ್ದ ಈ ಡೆಡ್ಲಿ ಕಾಂಬಿನೇಷನ್ ನಾಲ್ಕು ವರ್ಷದ ಬಳಿಕ ಸೀಕ್ವೆಲ್ ಗೆ ಕೈ ಹಾಕಿದ್ದಾರೆ. ರಾಮ್ ಹುಟ್ಟುಹಬ್ಬದ ಪ್ರಯುಕ್ತ ಟೈಟಲ್ ಹಾಗೂ ರಿಲೀಸ್ ಡೇಟ್ ಅನೌನ್ಸ್ ಮಾಡಲಾಗಿತ್ತು. ಇಂದು ಹೈದ್ರಾಬಾದ್ ನಲ್ಲಿ ಸಿನಿಮಾದ ಮುಹೂರ್ತ ಸಮಾರಂಭ ನೆರವೇರಿಸಲಾಗಿದೆ. ಚಾರ್ಮಿ ಡಬಲ್ ಇಸ್ಮಾರ್ಟ್ ಸಿನಿಮಾಗೆ ಕ್ಲಾಪ್ ಮಾಡಿದರೆ, ನಿರ್ದೇಶಕ ಪುರಿ ಜಗನ್ನಾಥ್ ಮೊದಲ ಶಾಟ್ ಗೆ ಆಕ್ಷನ್ ಕಟ್ ಹೇಳಿದರು.

ಡಬಲ್ ಮಾಸ್ ಹಾಗೂ ಡಬಲ್ ಮನರಂಜನೆ ನೀಡಲು ಸಜ್ಜಾಗಿರುವ ಪುರಿ ಜಗನ್ನಾಥ್ ಡಬಲ್ ಇಸ್ಮಾರ್ಟ್ ಸಿನಿಮಾದ ಶೂಟಿಂಗ್ ಇದೇ ತಿಂಗಳ 12ರಿಂದ ಶುರುವಾಗಲಿದೆ. ಮುಂದಿನ ವರ್ಷ ಅಂದ್ರೆ 2024‌ ಮಾರ್ಚ್ 8 ರಂದು ಶಿವರಾತ್ರಿ ಹಬ್ಬಕ್ಕೆ ಈ ಚಿತ್ರ ತೆರೆಗೆ ಬರಲಿದೆ.

ಪುರಿ ಜಗನ್ನಾಥ್ ಕಥೆ ಬರೆದು ನಿರ್ದೇಶಿಸುತ್ತಿರುವ ಡಬಲ್ ಇಸ್ಮಾರ್ಟ್ ಸಿನಿಮಾವನ್ನು ಪುರಿ ಕನೆಕ್ಟ್ಸ್ ನಡಿ ಚಾರ್ಮಿ ಕೌರ್ ಹಾಗೂ ಪುರಿ ಜಗನ್ನಾಥ್ ನಿರ್ಮಿಸುತ್ತಿದ್ದಾರೆ. ಲೈಗರ್ ಸಿನಿಮಾದಲ್ಲಿ ಖಳನಾಯಕ ಘರ್ಜಿಸಿದ್ದ ವಿಷು ರೆಡ್ಡಿ ಪುರಿ ಕನೆಕ್ಟ್ ಸಿಇಒ ಆಗಿ ಕೆಲಸ ಮಾಡುತ್ತಿದ್ದಾರೆ. ಭಾರೀ ಬಜೆಟ್ ನಲ್ಲಿ ತಯಾರಾಗುತ್ತಿರುವ ಈ ಸಿನಿಮಾ ತಾಂತ್ರಿಕವಾಗಿ ಶ್ರೀಮಂತಿಕೆಯಿಂದ ಕೂಡಿರಲಿದೆ.

ಮುಂದಿನ ವರ್ಷದ ಶಿವರಾತ್ರಿ ಹಬ್ಬಕ್ಕೆ ಬಿಡುಗಡೆಯಾಗಲಿರುವ ಈ ಚಿತ್ರ ತೆಲುಗು, ತಮಿಳು, ಕನ್ನಡ, ಹಿಂದಿ ಹಾಗೂ‌ ಮಲಯಾಳಂ ಭಾಷೆಯಲ್ಲಿ ಮೂಡಿ ಬರಲಿದೆ. ಉಳಿದ ತಾರಾಬಳಗ ಹಾಗೂ ತಾಂತ್ರಿಕ ವರ್ಗದ ಮಾಹಿತಿಯನ್ನು ಶೀಘ್ರದಲ್ಲೇ ಘೋಷಣೆ ಮಾಡುವುದಾಗಿ ಚಿತ್ರತಂಡ ತಿಳಿಸಿದೆ.

ನ್ಯೂಸ್ ಡೆಸ್ಕ್ ಫಿಲ್ಮಿ ಸ್ಕೂಪ್

Scroll to Top
Share via
Copy link
Powered by Social Snap