Karnataka Bhagya

ಮತ್ತೆ ಸದ್ದು ಮಾಡುತ್ತಿದೆ 9ಕೋಟಿ ವಿಚಾರ ಕಿಚ್ಚನ ಪರ ಮತ್ತೆ ಬ್ಯಾಟ್ ಬೀಸಿದ ಜಾಕ್ ಮಂಜು, ವಾಣಿಜ್ಯ ಮಂಡಳಿಗೆ ಕಿಚ್ಚನ ಅಭಿಮಾನಿಗಳು ಮುತ್ತಿಗೆ ಹಾಕಲಿದ್ದಾರೆ.

ಸುದೀಪ್ ಮೇಲಿನ ಆರೋಪಗಳಿಗೆ ತಾವು ಉತ್ತರಿಸುವುದಾಗಿ ಜಾಕ್ ಮಂಜು ಹೇಳಿದ್ದಾರೆ. ಜೊತೆಗೆ ಸುದೀಪ್ ಅವರ ಅಭಿಮಾನಿಗಳು ಕೂಡ ಇಂದು ವಾಣಿಜ್ಯ ಮಂಡಳಿಗೆ ಮುತ್ತಿಗೆ ಹಾಕುವುದಾಗಿ ಸಂದೇಶವನ್ನು ರವಾನಿಸಿದ್ದಾರೆ.

ನಿರ್ಮಾಪಕ ಎನ್.ಎಂ. ಕುಮಾರ್ ತಮಗೆ ಸುದೀಪ್ ಕಾಲ್ ಶೀಟ್ ನೀಡುತ್ತಿಲ್ಲವೆಂದು ಆರೋಪ ಮಾಡಿದ್ದರೆ, ನಿನ್ನೆಯಷ್ಟೇ ಮತ್ತೋರ್ವ ನಿರ್ಮಾಪಕ ರೆಹಮಾನ್ ಕೂಡ ಸುದೀಪ್ ಅವರಿಂದ ತಮಗೆ ಹಾನಿಯಾಗಿದೆ ಎಂದು ಪತ್ರಿಕಾಗೋಷ್ಠಿ ನಡೆಸಿದ್ದರು.
ಜಾಕ್ ಮಂಜು ಮತ್ತೊಂದು ಪತ್ರಿಕಾಗೋಷ್ಠಿಯನ್ನು ಆಯೋಜನೆ ಮಾಡಿದ್ದಾರೆ. ಸುದೀಪ್ ಬಗ್ಗೆ ಆರೋಪ ಮಾಡಿದ ರೆಹಮಾನ್ ಜೊತೆಯಲ್ಲೇ ಪತ್ರಿಕಾಗೋಷ್ಠಿ ಮಾಡುವುದಾಗಿ ತಿಳಿಸಿದ್ದಾರೆ.

ತಮ್ಮ ವ್ಯಕ್ತಿತ್ವಕ್ಕೆ ಕುಮಾರ್ ಧಕ್ಕೆ ತರುತ್ತಿದ್ದಾರೆ ಎಂದು ಮಾನನಷ್ಟ ನೋಟಿಸ್ ಕಳುಹಿಸಿದ್ದಾರೆ. ಬರೋಬ್ಬರಿ 10 ಕೋಟಿ ರೂಪಾಯಿ ಮಾನನಷ್ಟ ಕಟ್ಟಿಕೊಡಬೇಕು ಎಂದು ನೋಟಿಸ್ ನಲ್ಲಿ ಉಲ್ಲೇಖಿಸಿದ್ದಾರೆ.

ಈ ಎಲ್ಲ ಆರೋಪ ಪ್ರತ್ಯಾರೋಪಕ್ಕೆ ಉತ್ತರ ಎನ್ನುವಂತೆ ಸುದೀಪ್, ಚಲನಚಿತ್ರ ವಾಣಿಜ್ಯ ಮಂಡಳಿ, ನಿರ್ಮಾಪಕರ ಸಂಘ ಮತ್ತು ಕಲಾವಿದರ ಸಂಘಕ್ಕೆ ಪತ್ರ ಬರೆದಿದ್ದಾರೆ.

ಯಾವುದೇ ನಿರ್ಮಾಪಕರು, ಯಾರೇ ಕಲಾವಿದರು, ತಂತ್ರಜ್ಞರ ಮೇಲೆ ನಿರಾಧಾರ ಸುಳ್ಳು ಆರೋಪಗಳನ್ನು ಮಾಡುವಾಗ, ಕನಿಷ್ಠ ದಾಖಲಾತಿಗಳನ್ನು ಪರಿವೀಕ್ಷಿಸುವುದು ಮಾತೃ ಸಂಸ್ಥೆಗಳಾದ ನಿಮ್ಮದೂ ಜವಾಬ್ದಾರಿ ಆಗಿರುತ್ತದೆಂದು ವಿನಮ್ರತೆಯಿಂದ ಮನವಿ ಮಾಡುತ್ತೇನೆ ಎಂದು ಮಾತೃ ಸಂಸ್ಥೆಗಳಿಗೂ ಕಿಚ್ಚ ಪಾಠ ಮಾಡಿದ್ದಾರೆ.

27 ವರ್ಷಗಳ ಕಾಲ ನಾನೂ ಎಂದಾದರೂ ಒಂದೇ ಒಂದು ಕಪ್ಪು ಚುಕ್ಕೆ ಬೀಳುವಂತೆ ನಡೆದುಕೊಂಡಿಲ್ಲ. 80 ವರ್ಷಗಳ ಕಾಲ ಚಿತ್ರರಂಗದ ರಥ ಎಳೆದು ಬಂದಿರುವುದು, ಈ ನಂಬಿಕೆ ಎಂಬ ಹಗ್ಗದ ಮೇಲೇಯೆ. ಆ ನಂಬಿಕೆಯ ಹಗ್ಗದ ಮೇಲೆಯೇ ನಾನು ವಿಶೇಷ ಪಾತ್ರಗಳನ್ನು ಹೊರತು ಪಡಿಸಿ, 45 ಸಿನಿಮಾಗಳಲ್ಲಿ ದಾಖಲೆಯಾಗಿ ಉಳಿದಿದ್ದೇನೆ. ನನಗೂ ಬಹುಪಾಲು ನಿರ್ಮಾಪಕರಿಂದ ಹಣ ಬರಬೇಕಿದೆ. ಎಂದಾದರೂ ಮಂಡಳಿಯ ಕದ ತಟ್ಟಿದ್ದೇನೆಯೇ? ಈವರೆಗೂ ಈ ನಿಮ್ಮ ಪ್ರೀತಿಯ ಸುದೀಪ ಒಳ್ಳೆತನಕ್ಕೆ ಉದಾಹರಣೆ ಆಗಿದ್ದಾನೆ ಹೊರತು ಕೆಟ್ಟತನಕ್ಕಲ್ಲ ಎಂದು ಹೇಳುವ ಮೂಲಕ ತಮಗೂ ನಿರ್ಮಾಪಕರಿಂದ ಬಾಕಿ ಬರಬೇಕಾಗಿದ್ದನ್ನೂ ನೆನಪಿಸಿದ್ದಾರೆ.

ಚಿತ್ರರಂಗದ ಭವಿಷ್ಯಕ್ಕೆ ಕೆಟ್ಟ ಉದಾಹರಣೆ ದಕ್ಕಬಾರದು ಅದಕ್ಕೆ ಈ ಕಠಿಣವಾದ ಹೋರಾಟ ಮಾಡುತ್ತಿರುವುದಾಗಿ ಕಿಚ್ಚ ಪತ್ರದಲ್ಲಿ ಬರೆದಿದ್ದಾರೆ. ಯಾರ ಜೀವ ಹೋಗಲೂ ನಾನು ಬದುಕಿನುದ್ದಕ್ಕೂ ಸಾಕ್ಷಿಯಾಗಲಾರೆ ಎಂದು ಹೇಳುವ ಮೂಲಕ ಎನ್.ಎಂ. ಸುರೇಶ್ ಅವರಿಗೂ ಇದೇ ಪತ್ರದಲ್ಲಿ ಉತ್ತರ ನೀಡಿದ್ದಾರೆ.

ನ್ಯೂಸ್ ಡೆಸ್ಕ್ ಫಿಲ್ಮಿ ಸ್ಕೂಪ್

Scroll to Top
Share via
Copy link
Powered by Social Snap