Karnataka Bhagya
ಕರ್ನಾಟಕ

ಯಾದಗಿರಿಯಲ್ಲಿ ಮಾಧ್ಯಮ ಕಾರ್ಯಾಗಾರ ನಾಳೆ

ಯಾದಗಿರಿಯಲ್ಲಿ ಮಾಧ್ಯಮ ಕಾರ್ಯಾಗಾರ ನಾಳೆ

ಕರ್ನಾಟಕ ಭಾಗ್ಯ ವಾರ್ತೆ
ಯಾದಗಿರಿ :
ನಗರದ ಎಸ್‌ಡಿಎನ್ ಹೊಟೇಲ್ ಸಭಾಂಗಣದಲ್ಲಿ ಭಾರತ ಸರ್ಕಾರದ ವಾರ್ತಾ ಶಾಖೆಯಿಂದ ಆ.೨೯ ರಂದು ಮಾಧ್ಯಮ ಪ್ರತಿನಿಧಿಗಳಿಗೆ ಕಾರ್ಯಾಗಾರ ಆಯೋಜನೆ ಮಾಡಲಾಗಿದೆ ಎಂದು ಭಾರತ ಸರ್ಕಾರದ ವಾರ್ತಾ ಶಾಖೆ (ಪಿಐಬಿ) ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಭಾರತ ಸರ್ಕಾರದ ವಾರ್ತಾ ಶಾಖೆ (ಪಿಐಬಿ) ಬೆಂಗಳೂರು ಹಾಗೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ (ರಿ)., ಕರ್ನಾಟಕ ಕಾರ್ಯನಿರತ ಪತ್ರಿಕೆಗಳ ಸಂಪಾದಕರ ಸಂಘ (ರಿ). ಜಿಲ್ಲಾ ಘಟಕ ಯಾದಗಿರಿ ಇವರ ಸಂಯುಕ್ತಾಶ್ರಯದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ “ವಾರ್ತಾಲಾಪ ಕಾರ್ಯಾಗಾರ” ನಡೆಯಲಿದ್ದು, ವಾರ್ತಾಲಾಪದ ಉದ್ಘಾಟನೆಯನ್ನು ರಾಯಚೂರು ಲೋಕಸಭಾ ಕ್ಷೇತ್ರದ ಮಾನ್ಯ ಸಂಸದರಾದ ಜಿ. ಕುಮಾರ ನಾಯಕ ಹಾಗೂ ಕಲಬುರಗಿ ಲೋಕಸಭಾ ಕ್ಷೇತ್ರದ ಮಾನ್ಯ ಸಂಸದರಾದ ರಾಧಾಕೃಷ್ಣ ದೊಡ್ಡಮನಿ ಅವರು ನೆರವೇರಿಸಲಿದ್ದಾರೆ.
ಕರ್ನಾಟಕ ಸರ್ಕಾರದ ಮಾನ್ಯ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪಗೌಡ ದರ್ಶನಾಪೂರ, ವಿಧಾನ ಪರಿಷತ್ತಿನ ಮಾನ್ಯ ವಿರೋಧ ಪಕ್ಷದ ನಾಯಕರಾದ ಛಲವಾದಿ ಟಿ. ನಾರಾಯಣಸ್ವಾಮಿ ಉಪಸ್ಥಿತರಿರಲಿದ್ದಾರೆ, ಯಾದಗಿರಿ ಕ್ಷೇತ್ರದ ಮಾನ್ಯ ಶಾಸಕರಾದ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶಾಸಕರುಗಳಾದ ಡಾ. ಬಿ.ಜಿ. ಪಾಟೀಲ, ಡಾ. ಚಂದ್ರಶೇಖರ ಬಿ. ಪಾಟೀಲ, ಶಶೀಲ್ ಜಿ. ನಮೋಶಿ, ಶಾಸಕರಾದ ಶ್ರೀ ಶರಣಗೌಡ ಕಂದಕೂರ, ರಾಜಾ ವೇಣುಗೋಪಾಲ ನಾಯಕ, ಯಾದಗಿರಿ ನಗರಸಭೆಯ ನಗರಸಭೆ ಅಧ್ಯಕ್ಷರಾದ ಕು. ಲಲಿತಾ ಅನಪೂರ, ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಾಬೂರಾವ್ ಕಾಡ್ಲೂರ, ಭಾರತ ಸರ್ಕಾರದ ವಾರ್ತಾ ಶಾಖೆಯ ಹೆಚ್ಚುವರಿ ಮಹಾನಿರ್ದೇಶಕರಾದ ಎಸ್.ಜಿ. ರವೀಂದ್ರ, ಯಾದಗಿರಿ ಜಿಲ್ಲಾಧಿಕಾರಿಗಳಾದ ಹರ್ಷಲ್ ಭೋಯರ್, ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪೃಥ್ವಿಕ್ ಶಂಕರ್, ಯಾದಗಿರಿ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲವೀಶ್ ಒರಡಿಯಾ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ (ಹೆ. ಪ್ರ.) ಸುಲೈಮಾನ್ ಡಿ. ನದಾಫ್, ಯಾದಗಿರಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಮಲ್ಲಪ್ಪ ಸಂಕೀನ್, ಕರ್ನಾಟಕ ಕಾರ್ಯನಿರತ ಪತ್ರಿಕೆಗಳ ಸಂಪಾದಕರ ಸಂಘ (ರಿ). ಯಾದಗಿರಿ ಜಿಲ್ಲಾ ಘಟಕದ ಅಧ್ಯಕ್ಷರಾದ ಸಿದ್ದಪ್ಪ ಲಿಂಗೇರಿ ಅವರುಗಳು ಭಾಗವಹಿಸಲಿದ್ದಾರೆ.
ಕಾರ್ಯಾಗಾರದ ಮೊದಲ ಅಧಿವೇಶನದಲ್ಲಿ ‘ಮಹತ್ವಾಕಾಂಕ್ಷೆ ಜಿಲ್ಲೆಯ ಪ್ರಾಮುಖ್ಯತೆ ಮತ್ತು ಉದ್ದೇಶ’ ವಿಷಯದ ಕುರಿತು ಯಾದಗಿರಿ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲವೀಶ್ ಒರಡಿಯಾ ಅವರು ಮಾತನಾಡಲಿದ್ದಾರೆ.
‘ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ, ಭಾರತೀಯ ನ್ಯಾಯ ಸಂಹಿತೆ ಹಾಗೂ ಭಾರತೀಯ ಸಾಕ್ಷ್ಯ ಅಧಿನಿಯಮ, ೨೦೨೩ರ ಕುರಿತು ಸುರಪುರದ ಉಪ ಪೊಲೀಸ್ ಅಧೀಕ್ಷಕರಾದ ಜಾವೇದ್ ಇನಾಂದಾರ್ ಅವರು ಮಾಹಿತಿ ಹಂಚಿಕೊಳ್ಳಲಿದ್ದಾರೆ.
ಹಣಕಾಸು ಸೇರ್ಪಡೆ ಪರಿಪೂರ್ಣತೆ ಅಭಿಯಾನದ ಕುರಿತು ಯಾದಗಿರಿಯ ಎಸ್ ಬಿ ಐ ಹಾಗೂ ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ನ ವ್ಯವಸ್ಥಾಪಕರಾದ ಭೀಮರಾವ್ ಪಂಚಾಳ, ಕೃಷಿ ತೋಟಗಾರಿಕಾ ವಲಯದ ಯೋಜನೆಗಳ ಅನುಷ್ಠಾನದ ಕುರಿತು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ರತೇಂದ್ರನಾಥ ಸೂಗೂರ ಅವರು ಮಾತನಾಡಲಿದ್ದಾರೆ.
ಮಧ್ಯಾಹ್ನದ ಎರಡನೇ ಅಧಿವೇಶನದಲ್ಲಿ ಉದ್ಯೋಗ ಆಧಾರಿತ ಪ್ರೋತ್ಸಾಹಧನ (ಇಐI) ಉದ್ಯೋಗದಾತರು ಮತ್ತು ಉದ್ಯೋಗಿಗಳ ನೋಂದಣಿ ಪ್ರಚಾರ ಯೋಜನೆ (SPಖಇಇ) ವಿಷಯದ ಕುರಿತು ಕಲಬುರಗಿಯ ಇ.ಎಸ್.ಐ.ಸಿ ಜಂಟಿ ನಿರ್ದೇಶಕರಾದ ಶ್ರೀ ಯುವರಾಜ್ ಎಸ್.ವಿ., ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಯೋಜನೆಗಳ ಅನುಷ್ಠಾನದ ಕುರಿತು ಯಾದಗಿರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಮಹೇಶ್ ಬಿರಾದಾರ್ ಅವರು ಮಾಹಿತಿ ಹಂಚಿಕೊಳ್ಳಲಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನೆಗಳ ಅನುಷ್ಠಾನದ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ತಿಪ್ಪಣ್ಣ ಪಿ. ಸಿರಸಿಗಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ನಿರ್ಮಲಾ ಹಾಗೂ ಯುವ ಸಬಲೀಕರಣ-ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ಕಲಬುರಗಿ ನೆಹರು ಯುವ ಕೇಂದ್ರದ ಜಿಲ್ಲಾ ಯುವಜನ ಅಧಿಕಾರಿಗಳಾದ ಮಯೂರ್ ಕುಮಾರ್ ಮಾತನಾಡಲಿದ್ದಾರೆ.

ಯಾದಗಿರಿಯಲ್ಲಿ ಮಾಧ್ಯಮ ಕಾರ್ಯಾಗಾರ ನಾಳೆ

Related posts

ಹೊಸ ಚಿತ್ರದೊಂದಿಗೆ ಒಟಿಟಿಗೆ ಬರಲಿದ್ದಾರೆ ಸತೀಶ್ ನೀನಾಸಂ.

Nikita Agrawal

ಸರ್ಕಾರದಿಂದ ಬೀಜಗಳ ಬೆಲೆ ಹೆಚ್ಚಳ : ಮಲ್ಲಣ್ಣಗೌಡ ಹಗರಟಗಿ ವಿರೋಧ

Mahesh Kalal

ವಿದ್ಯುತ್ ತಗುಲಿ ಮೃತಪಟ್ಟ ರೈತನ ಕುಟುಂಬಕ್ಕೆ ಶಾಸಕ ಚೆನ್ನಾರೆಡ್ಡಿಗೌಡ ಪಾಟೀಲ ನೆರವು

Mahesh Kalal

Leave a Comment

Share via
Copy link
Powered by Social Snap