ಕರ್ನಾಟಕ ಭಾಗ್ಯ ವಾರ್ತೆ
ಯಾದಗಿರಿ : ಇಲ್ಲಿನ ವೀರಶೈವ ಕಲ್ಯಾಣ ಮಂಟಪದಲ್ಲಿ ನಡೆದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗಾಗಿ ನಡೆದ ಚುನಾವಣೆಯಲ್ಲಿ ಯಾದಗಿರಿ ಶಾಸಕ ಚನ್ನಾರಡ್ಡಿ ಪಾಟೀಲ ತುನ್ನೂರ ಮತ ಚಲಾಯಿಸಿದರು.ರಾಜ್ಯ ಘಟಕದ ಕಾರ್ಯನಿರ್ವಾಹಕ ಸಮಿತಿಯ ಸದಸ್ಯ ಸ್ಥಾನಗಳ ಚುನಾವಣೆಗಾಗಿ ಚುನಾವಣೆ ನಡೆಯುತ್ತಿದ್ದು, ಯಾದಗಿರಿ ಶಾಸಕರು ಸೇರಿದಂತೆ ಹಲವು ಜನಪ್ರತಿನಿಧಿಗಳು ವೀರಶೈವ ಮುಖಂಡರು, ಸದಸ್ಯರು ಮತ ಚಲಾಯಿಸಿದರು. ಈ ಸಂದರ್ಭದಲ್ಲಿ ಹಲವು ಸದಸ್ಯರಿದ್ದರು.