ಗ್ಲೋಬಲ್ ಐಕಾನ್ ಆಗಿರುವ ನಟಿ ಪ್ರಿಯಾಂಕಾ ಚೋಪ್ರಾ ಜೋನಾಸ್ ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ತಮ್ಮ ಹೆಸರಿನ ಜೊತೆಯಿದ್ದ ಪತಿಯ ಹೆಸರನ್ನು ತೆಗೆದುಹಾಕಿದ್ದಾರೆ. ಇದರೊಂದಿಗೆ ಪ್ರಿಯಾಂಕಾ ಚೋಪ್ರಾ ಮತ್ತು ಪಾಪ್ ಸ್ಟಾರ್ ನಿಕ್ ಜೋನಾಸ್ ದಾಂಪತ್ಯದಲ್ಲಿ ಬಿರುಕು ಮೂಡಿರುವ ಅನುಮಾನಗಳು ಸೃಷ್ಟಿ ಆಗಿದೆ…
ಪ್ರಿಯಾಂಕ ಹಾಗೂ ನಿಕ್ ಜೋನಸ್ ಇಬ್ಬರು ಪ್ರೀತಿ ಮಾಡಿ ಮದುವೆ ಆಗಿದ್ದರು.ಮ ಮದುವೆಯ ನಂತರ ಪ್ರಿಯಾಂಕಾ ಚೋಪ್ರಾ ಇನ್ ಸ್ಟಾಗ್ರಾಂನಲ್ಲಿ ತಮ್ಮ ಹೆಸರಿನ ಜೊತೆಗೆ ಜೋನಾಸ್ ಎಂದು ಸೇರಿಸಿಕೊಂಡಿದ್ದರು. ಇಂದು ಜೋನಾಸ್ ಹೆಸರನ್ನು ತೆಗೆದುಹಾಕಿರುವುದು ತೀವ್ರ ಕುತೂಹಲಕ್ಕೆಡೆ ಮಾಡಿದೆ.
2018 ಡಿಸೆಂಬರ್1 ರಂದು ವಿವಾಹವಾಗಿದ್ದರು ಪ್ರಿಯಾಂಕ ಹಾಗೂ ನಿಕ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು…ಮದುವೆ ನಂತರ ಟ ಗೆ ಪ್ರಿಯಾಂಕ ಶಿಫ್ಟ್ ಆಗಿದ್ದು ಅಲ್ಲಿಯೂ ಇಂಡಿಯನ್ ಸ್ಟೈಲ್ ನ ಹೊಸ ರೆಸ್ಟೋರೆಂಟ್ ಆರಂಭ ಮಾಡಿದ್ರು…ಅದಷ್ಟೇ ಅಲ್ಲದೆ ಇತ್ತೀಚಿಗಷ್ಟೇ ಹೊಸ ಮನೆಗೆ ಸ್ಥಳಾಂತರಗೊಂಡಿದ್ದ ಪ್ರಿಯಾಂಕಾ ದೀಪಾವಳಿಯನ್ನು ಅಲ್ಲಿಯೇ ಆಚರಿಸಿಕೊಂಡಿದ್ದರು. ಆ ಸಂದರ್ಭದಲ್ಲಿ ಪತಿಯ ಜೊತೆ ಫೋಟೊ ಕ್ಲಿಕ್ಕಿಸಿಕೊಂಡು ಈ ಬಾರಿಯ ದೀಪಾವಳಿ ತುಂಬಾ ಸ್ಪೆಷಲ್ ಎನ್ನುವ ಸಂದೇಶ ಹಂಚಿಕೊಂಡಿದ್ದರು…ಇನ್ಮು ಕೆಲವೇ ದಿನಗಳಲ್ಲಿ ಸಿಹಿ ಸುದ್ದಿ ಕೊಡ್ತಾರೆ ಅಂತ ಕಾದಿದ್ದ ಅಭಿಮಾನಿಗಳಿಗೆ ಈಗ ಪ್ರಿಯಾಂಕ ಸೋಷಿಯಲ್ ಮಿಡಿಯಾದಲ್ಲಿ ಗಂಡನ ಹೆಸರು ತೆಗೆದುಹಾಕಿರೋದು ಶಾಕಿಂಗ್ ಆಗಿದೆ..