ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 56ನೇ ಸಿನಿಮಾ ಅನೌನ್ಸ್ ಆಗಿದೆ…ಚಿತ್ರದ ಪೋಸ್ಟರ್ ಬಿಡುಗಡೆ ಆಗಿದ್ದು ಸಿನಿಮಾದ ಟೈಟಲ್ ಅನ್ನು ಬಿಟ್ಟುಕೊಟ್ಟಿಲ್ಲ ಸಿನಿಮಾತಂಡ…
ಕನ್ನಡ ಚಿತ್ರರಂಗಕ್ಕೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ಪ್ರತಿಷ್ಠಿತ ರಾಕ್ ಲೈನ್ ಎಂಟರ್ ಟೈನ್ಮೆಂಟ್ ಲಾಂಛನದಲ್ಲಿ ರಾಕ್ ಲೈನ್ ವೆಂಕಟೇಶ್ ಅವರು ನಿರ್ಮಿಸುತ್ತಿರುವ ನೂತನ ಚಿತ್ರದ ನಾಯಕರಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯಿಸುತ್ತಿದ್ದಾರೆ. ತರುಣ್ ಕಿಶೋರ್ ಸುಧೀರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.
D56 ಎಂಬ ನೂತನ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ನಾಯಕ ದರ್ಶನ್ ಅವರ ಹುಟ್ಟುಹಬ್ಬಕ್ಕೆ ಶುಭ ಕೋರಲಾಗಿದೆ…ಪೋಸ್ಟರ್ ನಲ್ಲಿ ಕ್ಯೂರಿಯಾಸಿಟಿ ಮೂಡಿಸೋ ಡೈಲಾಗ್ ರಿವಿಲ್ ಮಾಡಿದ್ದು ಸಿನಿಮಾಬಗ್ಗೆ ಈಗಲೇ ಕುತೂಹಲ ಮೂಡಿಸುವಂತಾಗಿದೆ…ಇನ್ನು ಶೀರ್ಷಿಕೆ ಸೇರಿದಂತೆ ಚಿತ್ರದ ಕುರಿತು ಹೆಚ್ಚಿನ ಮಾಹಿತಿ ಮುಂದಿನ ದಿನಗಳಲ್ಲಿ ರಿವಿಲ್ ಮಾಡಲು ಸಿನಿಮಾತಂಡ ಸಿದ್ದತೆ ಮಾಡಿಕೊಂಡಿದೆ….