ಸದ್ಯ ಭಾರತದಾದ್ಯಂತ ಸಿನಿರಸಿಕರು ಎದುರುಗಾಣುತ್ತಿರುವ ಸಿನಿಮಾಗಳಲ್ಲಿ ಒಂದು ನಮ್ಮ ಕನ್ನಡದ ಪಾನ್ m-ಇಂಡಿಯನ್ ಸಿನಿಮಾ ‘ವಿಕ್ರಾಂತ್ ರೋಣ’. ಎಲ್ಲೆಡೆ ಗುಲ್ಲೆಬ್ಬಿಸುತ್ತಿರುವ ಕಿಚ್ಚ ಸುದೀಪ್ ಅಭಿನಯದ ಈ ಸಿನಿಮಾ ಇದೇ ಜುಲೈ 28ಕ್ಕೆ ವಿಶ್ವದಾದ್ಯಂತ ವಿವಿಧ ಕಡೆಗಳಲ್ಲಿ ತೆರೆಕಾಣುತ್ತಿದೆ. ಹಾಡುಗಳು ಹಾಗು ಟ್ರೈಲರ್ ನಿಂದ ತನ್ನ ಮೇಲಿದ್ದ ನಿರೀಕ್ಷೆಗಳನ್ನು ಮುಗಿಲೆತ್ತರಕ್ಕೆ ಏರಿಸಿಕೊಂಡ ಈ ಸಿನಿಮಾ ಬಿಡುಗಡೆಗೆ ಸನ್ನಿಹಿತವಾಗುತ್ತಿದ್ದಂತೆ ಚಿತ್ರದ ಬಗೆಗಿನ ಹೊಸ ಹೊಸ ಸುದ್ದಿಗಳು ಹೊರಬೀಳುತ್ತಿವೆ.
‘ಅಭಿನಯ ಚಕ್ರವರ್ತಿ ‘ ಕಿಚ್ಚ ಸುದೀಪ್, ನಿರ್ದೇಶಕ ಅನೂಪ್ ಭಂಡಾರಿ ಸೇರಿದಂತೆ ಚಿತ್ರದ ಹಲವು ಕಲಾವಿದರು ಸದ್ಯ ಪ್ರಚಾರ ಕಾರ್ಯಕ್ರಮಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಸಾಲು ಸಾಲು ಸಂದರ್ಶನಗಳು, ಸುದ್ದಿಗೋಷ್ಠಿಗಳು ನಡೆಯುತ್ತಲೇ ಇವೆ. ಸದ್ಯ ಇವೆಲ್ಲದರ ನಡುವೆ ಸುದ್ದಿಯೊಂದು ಸ್ಯಾಂಡಲ್ವುಡ್ ನಲ್ಲಿ ಓಡಾಡುತ್ತಿದೆ. ರಕ್ಷಿತ್ ಶೆಟ್ಟಿ ಅವರ ಮಾಲೀಕತ್ವದ ‘ಪರಮ್ ವಾಹ್ ಸ್ಟುಡಿಯೋಸ್’ ಇತ್ತೀಚಿಗಷ್ಟೇ ಹೊಸ ಸಿನಿಮಾವೊಂದನ್ನು ಘೋಷಿಸಿ, ಅದರ ನಾಯಕ ನಾಯಕಿಯರ ಪರಿಚಯವನ್ನ ಮಾಡಿಸಿತ್ತು.
ಚಂದ್ರಜಿತ್ ಬೆಳ್ಳಿಯಪ್ಪ ಅವರ ನಿರ್ದೇಶನದ ಈ ಸಿನಿಮಾದಲ್ಲಿ ‘ಪಂಚತಂತ’ ಖ್ಯಾತಿಯ ವಿಹಾನ್ ಗೌಡ ಹಾಗು ಕಿರುತೆರೆಯ ಯುವರಾಣಿ ಎನಿಸಿಕೊಂಡ ಅಂಕಿತಾ ಅಮರ್ ಜೋಡಿಯಾಗಿ ನಟಿಸುತ್ತಿದ್ದಾರೆ. ಸದ್ಯ ಈ ಸಿನಿಮಾದ ಟೀಸರ್ ಅನ್ನು ‘ವಿಕ್ರಾಂತ್ ರೋಣ’ ಸಿನಿಮಾದೊಂದಿಗೆ ಜೋಡಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಎರಡೂ ಕಡೆಗಳಿಂದ ಇನ್ನೂ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.
‘ಪರಮ್ ವಾಹ್’ ತನ್ನ ಯಾವುದೇ ಸಿನಿಮಾದ ಟೀಸರ್ ಬಿಡುಗಡೆಯಿದ್ದರೆ, ಅದನ್ನು ಕನಿಷ್ಟ ಒಂದು ವಾರದ ಹಿಂದೆಯೇ ಘೋಷಿಸಿರುತ್ತದೆ. ‘ವಿಕ್ರಾಂತ್ ರೋಣ’ ಬಿಡುಗಡೆಗೆ ಕೇವಲ ನಾಲ್ಕು ದಿನಗಳಿದ್ದರು ಇನ್ನೂ ಯಾವುದೇ ಘೋಷಣೆ ಇವರಿಂದ ಬಂದಿಲ್ಲ. ಅಲ್ಲದೇ ಪ್ರಚಾರ ಕಾರ್ಯಗಳಲ್ಲಿ ಬ್ಯುಸಿಯಾಗಿರುವ್ ‘ವಿಕ್ರಾಂತ್ ರೋಣ’ ಕೂಡ ತಮ್ಮೆಲ್ಲ ಹೊಸ ಪ್ರಯತ್ನಗಳ ಬಗ್ಗೆ ಮಾತನಾಡುತ್ತಿದ್ದೂ, ಈ ಟೀಸರ್ ಬಗ್ಗೆ ಎಲ್ಲಿಯೂ ತುಟಿಬಿಚ್ಚಿಲ್ಲ. ಹಾಗಾಗಿ ಈ ಸುದ್ದಿ ಎಷ್ಟು ಸತ್ಯ, ಎಷ್ಟು ಸುಳ್ಳು ಎಂdu ಕಾದುನೋಡಬೇಕಿದೆ.