ಸ್ಯಾಂಡಲ್ವುಡ್ ನ ಗೋಲ್ಡನ್ ಕ್ವೀನ್ ಅಮೂಲ್ಯ ಸದ್ಯ ಕೌಟುಂಬಿಕ ಜೀವನದಲ್ಲಿ ಬ್ಯುಸಿ ಆಗಿದ್ದಾರೆ. ಮದುವೆ ಬಳಿಕ ಸಿನಿಮಾ ರಂಗದಿಂದ ದೂರ ಉಳಿದಿರುವ ಅಮೂಲ್ಯ ಇತ್ತೀಚೆಗೆ ಅವಳಿ ಮಕ್ಕಳಿಗೆ ಜನ್ಮ ನೀಡುವ ಮೂಲಕ ತಾಯಿಯಾಗಿ ಭಡ್ತಿ ಪಡೆದಿದ್ದಾರೆ. ನಟನೆಯ ಹೊರತಾಗಿ ನಟಿ ಅಮೂಲ್ಯ ಸೋಷಿಯಲ್ ಮೀಡಿಯಾದಲ್ಲಿ ಸದಾ ಸಕ್ರಿಯವಾಗಿ ಇರುತ್ತಾರೆ. ಫೋಟೋ ವಿಡಿಯೋಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಹತ್ತಿರ ಆಗಿದ್ದಾರೆ. ಹಾಗಾಗಿ ತಮ್ಮ ಜೀವನದ ಹಲವು ವಿಚಾರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಮೂಲ್ಯ ಶೇರ್ ಮಾಡಿಕೊಳ್ಳುತ್ತಾ ಇರುತ್ತಾರೆ.
ಇದೀಗ ನಟಿ ಅಮೂಲ್ಯ ತಮ್ಮ ಹೊಸ ಲುಕ್ ಜೊತೆಗೆ ಒಂದೆರಡು ಹೆಜ್ಜೆಯನ್ನೂ ಹಾಕಿದ್ದಾರೆ. ವಿಷಯ ಏನಪ್ಪಾ ಅಂದ್ರೆ ನಟಿ ಅಮೂಲ್ಯ ತಮ್ಮ ಮೊದಲ ರೀಲ್ಸ್ ನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಮತ್ತಷ್ಟು ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ.
ನಟಿ ಅಮೂಲ್ಯ ಮಕ್ಕಳಾದ ಬಳಿಕ ತಮ್ಮ ಇತ್ತೀಚೆಗಿನ ಫೋಟೋವನ್ನು ಹಂಚಿಕೊಂಡಿದ್ದರು. ಈಗ ವಿಡಿಯೋ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಅಮೂಲ್ಯ ಅವರ ಈ ವಿಡಿಯೋಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಅಮೂಲ್ಯ ಗ್ಲಾಮರಸ್ ಲುಕ್ ನೋಡಿದ ವೀಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಲಂಗ ದಾವಣಿ ತೊಟ್ಟು ಅಮೂಲ್ಯ ಹೆಜ್ಜೆ ಹಾಕಿರುವ ಅಮೂಲ್ಯ ಹಲವರ ಮನ ಗೆದ್ದಿದ್ದಾರೆ. ಅಂದ ಹಾಗೆ ಇವರು ಡ್ಯಾನ್ಸ್ ಮಾಡಿರುವುದು ಶರಣ್ ಮತ್ತು ನಿಶ್ವಿಕ ನಾಯ್ಡು ಅಭಿನಯದ ‘ಗುರು ಶಿಷ್ಯರು’ ಚಿತ್ರದ ಹಾಡಿಗೆ. ‘ಆಣೆ ಮಾಡಿ ಹೇಳುತೀನಿ’ ಎನ್ನುವ ಹಾಡಿಗೆ ಮೊದಲ ಬಾರಿಗೆ ರೀಲ್ಸ್ ಮಾಡುವುದರೊಂದಿಗೆ ”ನನ್ನ ಮೊದಲ ರೀಲ್ಸ್ ನನಗೆ ತುಂಬಾ ಇಷ್ಟವಾದ ಹಾಡು. ನಿರ್ಮಾಪಕ ತರುಣ್ ಸುಧೀರ್ ಸೇರಿದಂತೆ, ಇಡೀ ಚಿತ್ರತಂಡಕ್ಕೆ ದೊಡ್ಡ ಯಶಸ್ಸು ಸಿಗಲಿ” ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.
ಜೊತೆಗೆ ಅಮೂಲ್ಯ ಹೊಸ ಫೋಟೋಶೂಟ್ ಮಾಡಿಸಿ, ಫೋಟೊಗಳನ್ನೂ ಹಂಚಿಕೊಂಡಿದ್ದಾರೆ. ಹಸಿರು ಬಣ್ಣದ ಡ್ರೆಸ್ ತೊಟ್ಟು ಅಮುಲ್ಯಾ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಇನ್ನು ಅಮೂಲ್ಯ ಲುಕ್‌ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಮಕ್ಕಳಾದ ಬಳಿಕವೂ ಇಷ್ಟೋಂದು ಗ್ಲಾಮರಸ್ ಆಗಿ ಕಾಣಿಸುವ ಅಮೂಲ್ಯ ಕಮ್ ಬ್ಯಾಕ್ ಯಾವಾಗ ಎಂದು ಪ್ರಶ್ನೆ ಮಾಡುತ್ತಿದ್ದಾರೆ ಫ್ಯಾನ್ಸ್.