Karnataka Bhagya
Blogಅಂಕಣ

ಈಗೆಲ್ಲಾ‌ ಬ್ಲಾಕ್/ ವೈಟ್ ಇದ್ರೆ ಸಿನಿಮಾ ಓಡುತ್ತೆ, ಅದೇ ಈಗ ಟ್ರೆಂಡ್, ಹಾಸ್ಟೆಲ್ ಹುಡುಗರ ಜೊತೆ ದೂದ್ ಪೇಡ ದಿಗಂತ್

ಡೇರ್ ಡೆವಿಲ್ ಮುಸ್ತಫಾ ಯಶಸ್ಸಿನ ಬೆನ್ನಲ್ಲೆ ದೊಡ್ಡ ದೊಡ್ಡ ಸ್ಟಾಟ್ ಗಳೆ ಹಾಸ್ಟೆಲ್ ಹುಡುಗರಿಗೆ ಸಾಥ್ ನೀಡಿದ್ದಾರೆ. ಸಿನಿ ದುನಿಯಾದಲ್ಲಿ ಒಂದಲ್ಲಾ ಒಂದು ರೀತಿಯಲ್ಲಿ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಮೋಡಿ ಮಾಡುತ್ತಲೇಯಿದೆ. ಚಿತ್ರಕ್ಕೆ ರಮ್ಯಾ, ದಿಗಂತ್ ಸಾಥ್ ನೀಡಿದ್ದಾರೆ. ದಿಗಂತ್ ಟೀಸರ್ ಮೂಲಕ ಗಮನ ಸೆಳೆದಿದ್ದಾರೆ. ಈ ಬೆನ್ನಲ್ಲೇ ಚಿತ್ರದ ಟ್ರೈಲರ್‌ ರಿಲೀಸ್‌ಗೆ ಕೌಂಟ್ ಡೌನ್ ಶುರುವಾಗಿದೆ.

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಎಂಬ ಭಿನ್ನ ಟೈಟಲ್ ಮೂಲಕ ಸಿನಿಮಾ ತಂಡ ಗಮನ ಸೆಳೆಯುತ್ತಿದೆ. ಈಗಾಗಲೇ ಹಾಸ್ಟೆಲ್ ಹುಡುಗರು ಊರಿಗೆಲ್ಲಾ ಫೇಮಸ್ ಆಗಿದ್ದಾರೆ. ಅಲ್ಲದೆ ರಿಷಬ್ ಶೆಟ್ಟಿ, ಶೈನ್ ಶೆಟ್ಟಿ, ದಿಗಂತ್ ಅಂತಹ ಕನ್ನಡ ತಾರೆಯರು ನಟಿಸಿದ್ದಾರೆ. ಅಪ್ಪು, ರಕ್ಷಿತ್ ಶೆಟ್ಟಿ, ಕಿಚ್ಚ ಸುದೀಪ್, ರಮ್ಯಾ, ಸೂಪರ್‌ಸ್ಟಾರ್‌ಗಳೆಲ್ಲರೂ ಹೊಸಬರಿಗೆ ಬೆನ್ನೆಲುಬಾಗಿ ನಿಂತಿದ್ದಾರೆ.

ಹಾಸ್ಟೆಲ್ ಹುಡುಗರ ಜೊತೆ ದೂದ್ ಪೇಡಾ ದಿಗಂತ್ ಸಾಥ್ ನೀಡಿದ್ದು, ಕಪ್ಪು ಕಪ್ಪಾಗಿರೋ ಸಿನಿಮಾ ಬಗ್ಗೆ ಸಖತ್ ಡೈಲಾಗ್ ಬಿಟ್ಟಿದ್ದಾರೆ. ಆದರೆ ದಿಗಂತ್ ರೋಲ್ ಬಗ್ಗೆ ಹಿಂಟ್ ಬಿಟ್ಟುಕೊಟ್ಟಿಲ್ಲ. ದಿಗಂತ್ ಲುಕ್ ಮ್ಯಾನರಿಸಂ, ಡೈಲಾಗ್ ಡಿಲೆವರಿ ಎಲ್ಲವೂ ಮಜವಾಗಿದೆ. ಈಗೆಲ್ಲ ಕಪ್ಪು ಕಪ್ಪಾಗಿರೋದೇ ಟ್ರೆಂಡ್.. ಆಗಲೇ ಜನ ಥಿಯೇಟರ್‌ಗೆ ಬರೋದು ಅಂತ ಹೇಳಿರೋ ಡೈಲಾಗ್ ಸಿನಿಪ್ರಿಯರಿಗೆ ಖುಷಿ ಕೊಟ್ಟಿದೆ.

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾದ ಹಾಡು, ಟೀಸರ್‌ಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿತ್ತು. ಈಗ ಬೆನ್ನಲ್ಲೇ ಟ್ರೈಲರ್ ರಿಲೀಸ್ ಮಾಡುವುದಕ್ಕೆ ಚಿತ್ರತಂಡ ಸಜ್ಜಾಗಿದೆ. ಇದೇ ಜುಲೈ 10ರಂದು ಸಂಜೆ 6 ಗಂಟೆಗೆ ಸಿನಿಮಾ ಟ್ರೈಲರ್ ರಿಲೀಸ್ ಆಗಲಿದೆ. ಇದನ್ನು ದಿಗಂತ್ ವಿಡಿಯೋ ಮೂಲಕವೇ ಅನೌನ್ಸ್ ಮಾಡಲಾಗಿದೆ. ನಂದಿ ಲಿಂಕ್ಸ್ ಗ್ರೌಂಡ್‌ನಲ್ಲಿ ಅದ್ದೂರಿಯಾಗಿ ಟೀಸರ್ ಕಾರ್ಯಕ್ರಮ ಆಯೋಜಿಸಿದ್ದು, ಮುಖ್ಯ ಅತಿಥಿಗಳಾಗಿ ಅಶ್ವಿನಿ ಪುನೀತ್‌ರಾಜ್‌ಕುಮಾರ್, ಧ್ರುವ ಸರ್ಜಾ, ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ ಆಗಮಿಸುತ್ತಿದ್ದಾರೆ.

ಯೂತ್ ಸಬ್ಜೆಕ್ಟ್ ಕಥೆಯನ್ನೊಳಗೊಂಡ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾವನ್ನು ನಿತಿನ್ ಕೃಷ್ಣಮೂರ್ತಿ ಕಥೆ ಬರೆದು ನಿರ್ದೇಶಿಸಿದ್ದಾರೆ. ವರುಣ್ ಸ್ಟುಡಿಯೋಸ್ ಹಾಗೂ ಗುಲ್ ಮೋಹರ್ ಫಿಲ್ಮಂಸ್ ಬ್ಯಾನರ್ ನಡಿ ಪ್ರಜ್ವಲ್ ಬಿ.ಪಿ. ವರುಣ್ ಕುಮಾರ್ ಗೌಡ , ನಿತಿನ್ ಕೃಷ್ಣಮೂರ್ತಿ, ಅರವಿಂದ್ ಕೆ ಕಶ್ಯಪ್ ಬಂಡವಾಳ ಹೂಡಿದ್ದಾರೆ. ಪ್ರತಿ ಬಾರಿ ಯುನಿಕ್ ಕಾನ್ಸೆಪ್ಟ್ ಮೂಲಕ ಪ್ರಚಾರ ಮಾಡುತ್ತಿರುವ ಹಾಸ್ಟೆಲ್ ಹುಡುಗರ ಸಿನಿಮಾವನ್ನು ರಕ್ಷಿತ್ ಶೆಟ್ಟಿ ತಮ್ಮದೇ ಪರಂವಃ ಪಿಕ್ಚರ್ಸ್ ಮೂಲಕ ಪ್ರಸ್ತುತಪಡಿಸುತ್ತಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಅರವಿಂದ್ ಛಾಯಾಗ್ರಹಣ, ಸುರೇಶ್ ಸಂಕಲನವಿದೆ.

ನ್ಯೂಸ್ ಡೆಸ್ಕ್ ಫಿಲ್ಮಿ ಸ್ಕೂಪ್

Related posts

ನಾಳೆ ಪುನೀತ್ ಕನಸು ನನಸಾಗುವ ದಿನ

Karnatakabhagya

ಉಪ್ಪಿ ಅಣ್ಣನ ಮಗನಿಗೆ ಸ್ಯಾಂಡಲ್ ವುಡ್ ನಲ್ಲಿ ಭರ್ಜರಿ ಡಿಮ್ಯಾಂಡ್

Nikita Agrawal

ಅಮೂಲ್ಯ ಮನೆಯಲ್ಲಿ ಸಂಭ್ರಮದ ಕ್ಷಣಗಳು ಶುರು…

Nikita Agrawal
Share via
Copy link
Powered by Social Snap