ಕ್ರೀಡಾ ಸ್ಫೂರ್ತಿ ಮೆರೆಯಲು ಶಾಸಕ ಚೆನ್ನಾರೆಡ್ಡಿ ತುನ್ನೂರ ಸಲಹೆ
ಕರ್ನಾಟಕ ಭಾಗ್ಯ ಸುದ್ದಿ
ಯಾದಗಿರಿ : ಕ್ರೀಡೆಗಳು ದೈಹಿಕ, ಮಾನಸಿಕ ಆರೋಗ್ಯಕ್ಕೆ ಸಹಕಾರಿಯಾಗಿದ್ದು, ವಿದ್ಯಾರ್ಥಿಗಳು ಹೆಚ್ಚೆಚ್ಚು ಕ್ರೀಡೆಗಳಲ್ಲಿ ಭಾಗವಹಿಸಿ ಕ್ರೀಡಾ ಸ್ಫೂರ್ತಿ ಮೆರೆಯಬೇಕು ಎಂದು ಶಾಸಕ ಚೆನ್ನಾರೆಡ್ಡಿ ಪಾಟೀಲ ತುನ್ನೂರ ಸಲಹೆ ನೀಡಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಯಾದಗಿರಿ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆ ವಿದ್ಯಾರ್ಥಿಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ಕ್ರೀಡೆಯಲ್ಲಿ ಸೋಲು ಗೆಲವು ಸಹಜ, ಸೋಲನ್ನು ಸವಾಲಾಗಿ ಸ್ವೀಕರಿಸುವ ಮೂಲಕ ಗೆಲುವಿನತ್ತ ಮುನ್ನುಗ್ಗಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಿಇಒ ಬಸವರಾಜ ಶೆಟ್ಟಿ, ಕ್ಷೇತ್ರ ಸಂಪನ್ಮೂಲ ಅಧಿಕಾರಿ ಮಲ್ಲಿಕಾರ್ಜುನ ಪೂಜಾರಿ, ಅಕ್ಷರ ದಾಸೋಹ ಅಧಿಕಾರಿ ಕನಕಪ್ಪ, ದಾನಿಗಳಾದ ಬಿ.ಎನ್.ವಿಶ್ವನಾಥ ನಾಯಕ, ಮಲ್ಲಿಕಾರ್ಜುನ ಕಟ್ಟಿಮನಿ, ದೇವು ನಾಯಕ ಸೇರಿದಂತೆ ಇತರರಿದ್ದರು.