ಬಿಜೆಪಿಗೆ ಬಿ.ವೈ.ವಿಜಯೇಂದ್ರ ಸಾರಥ್ಯ : ಸಿಹಿ ಹಂಚಿ ಸಂಭ್ರಮಿಸಿದ ಮುದ್ನಾಳ ಪಡೆ
ಕರ್ನಾಟಕ ಭಾಗ್ಯ ವಾರ್ತೆ ಯಾದಗಿರಿ :
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ನೇಮಕವಾದ ಹಿನ್ನಲೆಯಲ್ಲಿ ನಗರದ ಸುಭಾಶ್ಚಂದ್ರ ಬೋಸ್ ವೃತ್ತದಲ್ಲಿ ಯುವ ಮುಖಂಡ ಮಹೇಶರೆಡ್ಡಿ ಮುದ್ನಾಳ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ಇದೇ ವೇಳೆ ಮಾತನಾಡಿದ ಮಹೇಶರೆಡ್ಡಿ ಮುದ್ನಾಳ, ಬಿಜೆಪಿಯನ್ನು ರಾಜ್ಯದಲ್ಲಿ ಮತ್ತಷ್ಟು ಪ್ರಬಲವಾಗಿಸಲು ಕೇಂದ್ರದ ನಾಯಕರು ಹಾಗೂ ಬಿಜೆಪಿ ಹೈಕಮಾಂಡ್ ತೆಗೆದುಕೊಂಡ ನಿರ್ಧಾರ ಸ್ವಾಗತಾರ್ಹವಾಗಿದೆ. ಇದರಿಂದ ಬಿಜೆಪಿ ಮತ್ತೋಮ್ಮೆ ಅಧಿಕಾರದ ಗದ್ದುಗೆ ಹಿಡಿಯುವಲ್ಲಿ ಯಾವುದೇ ಅನುಮಾನವಿಲ್ಲವೆಂದು ಹೇಳಿದರು.
ಲೋಕಸಭೆ ಮತ್ತು ರಾಜ್ಯದಲ್ಲಿ ನಡೆಯುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇನ್ನುಮುಂದೆ ಬಿಜೆಪಿಯೇ ಜಯಭೇರಿ ಭಾರಿಸಲಿದೆ. ಬಿ.ವೈ.ವಿಜಯೇಂದ್ರ ಅವರ ಮುಂದೆ ಕಾಂಗ್ರೆಸ್ ಆಟ ಏನು ನಡೆಯಲ್ಲವೆಂದು ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನಕಾರ್ಯದರ್ಶಿ ವೆಂಕಟರೆಡ್ಡಿ ಅಬ್ಬೆತುಮಕೂರ, ನಗರಸಭೆ ಮಾಜಿ ಅಧ್ಯಕ್ಷರಾದ ವಿಲಾಸ ಪಾಟೀಲ್, ಶಂಕರ ಸೋನಾರ್, ಬಿಜೆಪಿ ಮುಖಂಡರಾದ ಮಾರುತಿ ಕಲಾಲ, ಬಿಜೆಪಿ ಮಾಧ್ಯಮ ವಕ್ತಾರ ವಿರುಪಾಕ್ಷಯ್ಯಸ್ವಾಮಿ ಹೆಡಗಿಮದ್ರಾ, ಅನೀಲ ಕರಾಟೆ ಸೇರಿದಂತೆ ನೂರಾರು ಕಾರ್ಯಕರ್ತರಿದ್ದರು.