ರಾಜ್ಯಪಾಲರ ನಡೆಗೆ ಕಾಂಗ್ರೆಸ್ ಕೆಂಡ
ಕರ್ನಾಟಕ ಭಾಗ್ಯ ವಾರ್ತೆ
ಯಾದಗಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಮುಡಾ ಹಗರಣಕ್ಕೆ ಸಂಬAಧಿಸಿದAತೆ ರಾಜ್ಯಪಾಲರು ಪ್ರಾಸಿಕೂಶನ್‌ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ಆಗಸ್ಟ್ 19ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧ್ಯಕ್ಷ ಬಸರಡ್ಡಿ ಪಾಟೀಲ ಅನಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂದು ನಗರದ ಸುಭಾಷ್ ವೃತ್ತದಿಂದ ಬೆಳಗ್ಗೆ ೧೧ ಗಂಟೆಗೆ ಪಾದಯಾತ್ರೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿವೆಗೆ ಬೃಹತ್ ಪ್ರತಿಭಟನೆ ಮೂಲಕ ತೆರಳಿ ರಾಜ್ಯಪಾಲರು ಮತ್ತು ವಿರೋಧ ಪಕ್ಷಗಳ ಮುಖಂಡರ ವಿರುದ್ಧ ಮನವಿ ಸಲ್ಲಿಸಲಾಗುವುದು ಎಂದರು.
ಈ ಪ್ರತಿಭಟನೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪೂರ, ಶಾಸಕರು ಮಾಜಿ ಶಾಸಕರು, ಪಕ್ಷದ ಪ್ರಮುಖರು ಕಾರ್ಯಕರ್ತರು ಸೇರಿದಂತೆ ಸಾವಿರಾರು ಜನರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.