ಸ್ಯಾಂಡಲ್ ವುಡ್ ನ ಯುವರಾಜ ನಿಖಿಲ್ ಕುಮಾರ್ ಅಭಿನಯದ ರೈಡರ್ ಸಿನಿಮಾ ತೆರೆಗೆ ಬರಲು ಸಿದ್ಧವಾಗಿದೆ ಈಗಾಗಲೇ ಫಸ್ಟ್ ಲುಕ್ ಪೋಸ್ಟರ್ ಟೈಟಲ್ ಹಾಗೂ ಟೀಸರ್ ನಿಂದ ಸದ್ದು ಮಾಡಿರುವಂಥ ರೈಡರ್ ಪ್ರೇಕ್ಷಕರಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ ….
ಇತ್ತೀಚಿಗಷ್ಟೇ ಚಿತ್ರೀಕರಣ ಕಂಪ್ಲೀಟ್ ಮಾಡಿ ಪೋಸ್ಟ್ ಪ್ರೊಡಕ್ಷನ್ ನಲ್ಲಿ ಬ್ಯುಸಿಯಾಗಿದ್ದ ರೈಡರ್ ಚಿತ್ರತಂಡ ಸಿನಿಮಾದ ಎಲ್ಲಾ ಕೆಲಸಗಳನ್ನ ಕಂಪ್ಲೀಟ್ ಮಾಡಿ ಪ್ರಚಾರದ ಕೆಲಸವನ್ನ ಶುರು ಮಾಡಿಕೊಂಡಿದೆ …
ಅದರಂತೆಯೇ ಸಿನಿಮಾವನ್ನ ಡಿಸೆಂಬರ್ 25 ರಂದು ಕ್ರಿಸ್ಮಸ್ ವಿಶೇಷವಾಗಿ ತೆರೆಗೆ ತರಲು ಚಿತ್ರತಂಡ ಪ್ಲಾನ್ ಮಾಡಿಕೊಂಡಿದೆ ..ಚಿತ್ರಕ್ಕೆ ವಿಜಯ್ ಕುಮಾರ್ ಕೊಂಡ ಆಕ್ಷನ್ ಕಟ್ ಹೇಳಿದ್ದು ಶರತ್ ಚಕ್ರವರ್ತಿ ಸಂಭಾಷಣೆ ಬರೆದಿದ್ದಾರೆ ಅರ್ಜುನ್ ಜನ್ಯ ಸಂಗೀತ ನಿರ್ದೇಶನದ ಸಿನಿಮಾವಾಗಿದೆ….ಇದೇ ಮೊದಲ ಬಾರಿಗೆ ನಿಖಿಲ್ ಜತೆ ಕಾಶ್ಮೀರ ಪರದೇಸಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ ಸದ್ಯ ಸಿನಿಮಾದ ಹಾಡುಗಳು ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಸುದ್ದಿ ಮಾಡುತ್ತಿದ್ದು ಇನ್ನು ಕೆಲವೇ ದಿನಗಳಲ್ಲಿ ನಿಖಿಲ್ ರೈಡರ್ಸ್ ಸಿನಿಮಾ ತೆರೆಮೇಲೆ ಮಿಂಚಲಿದೆ …