ನಟಿ ಪ್ರಿಯಾಂಕ ಚೋಪ್ರಾ ಇತ್ತೀಚೆಗಷ್ಟೇ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ತಮ್ಮ ಪತಿಯ ಹೆಸರನ್ನು ಕೈ ಬಿಟ್ಟಿದ್ದರು ಈ ವಿಚಾರ ತಿಳಿದ ಅಭಿಮಾನಿಗಳು ಇಬ್ಬರ ಮಧ್ಯೆ ಬಿರುಕು ಮೂಡಿದೆ ..ಇವರ ದಾಂಪತ್ಯದಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವ ವದಂತಿಗಳು ಹಬ್ಬಿದ್ದು …
ಗಾಸಿಪ್ ಎಲ್ಲೆಡೆ ಹರಡುವ ಮುಂಚೆಯೇ ನಟಿ ಪ್ರಿಯಾಂಕಾ ಚೋಪ್ರಾ ಪರೋಕ್ಷವಾಗಿ ನಾವಿಬ್ಬರೂ ಚೆನ್ನಾಗಿದ್ದೇವೆ ಎನ್ನುವ ಸೂಚನೆ ಕೊಟ್ಟಿದ್ದಾರೆ …
ಮದುವೆ ನಂತರ ನಟಿ ಪ್ರಿಯಾಂಕಾ ಛೋಪ್ರಾ ಹಾಗೂ ನಿಕ್ ಜೋನಾಸ್ ಇಬ್ಬರೂ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿದ್ದಾರೆ ಮಂಗಳವಾರ ಇನ್ಸ್ಟಾಗ್ರಾಂನಲ್ಲಿ ನಿಕ್ ಜೋನಸ್ 1ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ …ಜಿಮ್ ನಲ್ಲಿ ವರ್ಕೌಟ್ ಮಾಡುವ ವಿಡಿಯೋ ಇದಾಗಿದ್ದು ಈ ವಿಡಿಯೋಗೆ ಪ್ರಿಯಾಂಕ ಕಮೆಂಟ್ ಮಾಡಿದ್ದಾರೆ ‘Damn! I just died in your arms’ ಎಂದು ಕಮೆಂಟ್ ಮಾಡುವ ಮೂಲಕ ಪತಿಯ ವಿಡಿಯೋಗೆ ಮೆಚ್ಚುಗೆ ಸೂಚಿಸಿದ್ದಾರೆ. ಆ ಮೂಲಕ ತಮ್ಮಿಬ್ಬರ ನಡುವೆ ಯಾವುದೇ ವೈಮನಸ್ಸು ಇಲ್ಲ ಎಂಬುದನ್ನು ಅವರು ಖಚಿತಪಡಿಸಿದ್ದಾರೆ.