Karnataka Bhagya
Blogರಾಜಕೀಯ

‘ಬೈ ಟು ಲವ್’ ಬಿಡುಗಡೆಗೆ ಡೇಟ್ ಫಿಕ್ಸ್. !

‘ಬಜಾರ್’ ಸಿನಿಮಾ ಖ್ಯಾತಿಯ ಧನ್ವೀರ್ ಮತ್ತು ‘ಕಿಸ್’ ಬ್ಯೂಟಿ ಶ್ರೀಲೀಲಾ ಅಭಿನಯದ ‘ಬೈ ಟು ಲವ್’ ಸಿನಿಮಾ ಬಿಡುಗಡೆಗೆ ದಿನಾಂಕ ಫಿಕ್ಸ್ ಆಗಿದೆ. ಹರಿ ಸಂತೋಷ್ ನಿರ್ದೇಶನ ಈ ಸಿನಿಮಾ ಸಾಕಷ್ಟು ಕುತೂಹಲ ಹುಟ್ಟು ಹಾಕಿದ್ದು‌ ಚಿತ್ರದ ಹಾಡು ಮತ್ತೆ ಪೋಸ್ಟರ್ ಸಖತ್ ವೈರಲ್ ಆಗಿದೆ…., ಸದ್ಯ ಬೈ ಟು ಲವ್ ಕಹಾನಿ ಕಣ್ತುಂಬಿಕೊಳ್ಳೋದಿಕ್ಕೆ ದಿನಗಣನೆ ಶುರುವಾಗಿದೆ.

ಬೈ ಟು ಲವ್ ಸಿನಿಮಾ ಬೆಳ್ಳಿಪರದಗೆ ಎಂಟ್ರಿ ಕೊಡಲು ಸಜ್ಜಾಗಿದೆ. ಇದೇ ತಿಂಗಳ 25ರಂದು ಅದ್ಧೂರಿಯಾಗಿ ಚಿತ್ರ ತೆರೆಗೆ ಬರಲಿದೆ. ‘ಬಜಾರ್‌’ನಲ್ಲಿ ಮಾಸ್‌ ಲುಕ್‌ನಲ್ಲಿ ಮಿಂಚಿದ್ದ ಧನ್ವೀರ್‌, ಈ ‘ಬೈ ಟು ಲವ್‌’ನಲ್ಲಿ ಲವರ್‌ ಬಾಯ್‌ ಪಾತ್ರ ಮಾಡಿದ್ದಾರೆ. ಶ್ರೀಲೀಲಾ ಮುದ್ದು ಮುದ್ದಾಗಿ ಮಲೆನಾಡ ಹುಡ್ಗಿಯಾಗಿ ಕಾಣಿಸಿಕೊಂಡಿದ್ದಾರೆ. ಗಣೇಶ್‌ ನಟನೆಯ ಸಖತ್‌, ನಿಖಿಲ್‌ ಕುಮಾರ್‌ಸ್ವಾಮಿ ನಟನೆಯ ಯದುವೀರ ಸಿನಿಮಾ ಹಾಗೂ ಜೋಗಿ ಪ್ರೇಮ್‌-ಧ್ರುವ ಸರ್ಜಾ ಕಾಂಬಿನೇಷನ್‌ನ ಸಿನಿಮಾಗಳನ್ನು ನಿರ್ಮಿಸುತ್ತಿರುವ ಕೆವಿಎನ್‌ ಪ್ರೊಡಕ್ಷನ್ಸ್ ನಡಿ ನಿಶಾ ವೆಂಕಟ್ ಕೋಣಂಕಿ ‘ಬೈ ಟು ಲವ್‌’ಗೆ ನಿರ್ಮಾಣ ಮಾಡಿದ್ದಾರೆ. ಮಹೇನ್ ಸಿಂಹ ಛಾಯಾಗ್ರಹಣ, ಅಜನೀಶ್‌ ಲೋಕನಾಥ್‌ ಸಂಗೀತ ಹಾಗೂ ಯೋಗಾನಂದ್‌ ಸಂಭಾಷಣೆ ಈ ಚಿತ್ರಕ್ಕಿದೆ.

ಬೈ ಟು ಲವ್ ಸಿನಿಮಾದ ಯಾರು ಏನಾದ್ರೂ ಅಂದ್ಕೊಂಡ್ಲಿ ಏನಂತೆ.. ಹಾಡು ಯೂಟ್ಯೂಬ್ ನಲ್ಲಿ ಧೂಳ್ ಎಬ್ಬಿಸಿದ್ದು ಧನ್ವೀರ್ ಮತ್ತು ಶ್ರೀಲೀಲಾ ಅವರ ಮುದ್ದು ಮುದ್ದು ತುಂಟಾಟಗಳನ್ನೇ ಕೊರಿಯೋಗ್ರಫಿ ಮಾಡಲಾಗಿದೆ. ನಿರ್ದೇಶಕ ಹರಿ ಸಂತೋಷ್ ಸಾಹಿತ್ಯ ಬರೆದಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಮಾನೋ ಕಂಠಸಿರಿಯಲ್ಲಿ ಮೂಡಿ ಬಂದಿರುವ ಹಾಡಿಗೆ ಸಖತ್ ರೆಸ್ಪಾನ್ಸ್ ಸಿಕ್ತಿದೆ.

Related posts

ಕೊನೆಗೂ ಸಿಕ್ತು ಬಿಗ್ ಅಪ್ಡೇಟ್, kichcha 46 ಬಗ್ಗೆ ಸಿನಿತಂಡ ಕೊಟ್ಟ ಸುಳಿವು, ಜುಲೈ-2ಕ್ಕೆ ಟೀಸರ್ ಔಟ್..!

kartik

‘ವಿಕ್ರಾಂತ್ ರೋಣ’ನ ವಿವಿಧ ವಿತರಕರು.

Nikita Agrawal

“ಹೊಂಬಾಳೆ” ಟ್ವೀಟ್ ಗೆ ಪ್ರೇಕ್ಷಕರು ಫುಲ್ ಕುಷ್ಏನದು ಟ್ವೀಟ್,ಇಲ್ಲಿದೆ ಕಂಪ್ಲೀಟ್ ಡೀಟೈಲ್..!

kartik

Leave a Comment

Share via
Copy link
Powered by Social Snap