ಕನ್ನಡಿಗರ ನೆಚ್ಚಿನ ನಟ ಪುನೀತ್ ರಾಜಕುಮಾರ್ ಅವರ ಕೊನೆಯ ಸಿನಿಮಾ ‘ಗಂಧದಗುಡಿ’ ಥಿಯೇಟರ್ ನಲ್ಲಿ ತೆರೆ ಕಾಣಲು ಸಜ್ಜಾಗಿ ನಿಂತಿದೆ. ಪ್ರಕೃತಿ ಸೌಂದರ್ಯ ಮತ್ತು ವನ್ಯಜೀವಿಗಳ ಕುರಿತ ಸಾಕ್ಷ್ಯಚಿತ್ರದ ಬಗ್ಗೆ ಅಪಾರ ಆಸಕ್ತಿಯನ್ನು ಹೊಂದಿದ್ದ ಅಪ್ಪು ಗಂಧದ ಗುಡಿ ಹೆಸರಿನಲ್ಲಿ ಸಿನಿಮಾ ನಿರ್ಮಾಣ ಮಾಡಿದ್ದರು. ಈ ಸಿನಿಮಾದಲ್ಲಿ ಪುನೀತ್ ರಾಜಕುಮಾರ್ ಅವರು ಕೂಡ ಕಾಣಿಸಿಕೊಳ್ಳಲಿದ್ದಾರೆ.
ಇದೀಗ ಸಿನಿಮಾ ರಿಲೀಸ್ ದಿನಾಂಕ ಘೋಷಣೆಯಾಗಿದೆ. ಅಪ್ಪು ನಿಧನ ಹೊಂದಿದ ಹಿಂದಿನ ದಿನ, ಅಂದರೆ ಬರುವ ಅಕ್ಟೋಬರ್ 28ರಂದು ಗಂಧದ ಗುಡಿ ಸಿನಿಮಾ ತೆರೆ ಕಾಣಲಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಅಶ್ವಿನಿ ಪುನೀತ್ ರಾಜಕುಮಾರ್ ”ಅಪ್ಪು ಅವರ ಕೊನೆಯ ಚಿತ್ರ. ಅವರು ಅವರಾಗಿಯೇ ಕಾಣಿಸಿಕೊಂಡಿರುವ ವಿಶಿಷ್ಟ ಕಥನ. ಕರ್ನಾಟಕದ ಅದ್ಭುತ ಜಗತ್ತನ್ನು ಅನ್ವೇಷಿಸುವ ಪಯಣ. ಅವರಿಗೆ ಅಪಾರ ಪ್ರೀತಿಯನ್ನು ಕೊಟ್ಟ ನಾಡಿಗೆ ಅವರ ಪ್ರೀತಿಯ ಕಾಣಿಕೆ’ ಎಂದು ಬರೆದುಕೊಂಡಿದ್ದಾರೆ. ಈ ಪೋಸ್ಟ್ಗೆ ಫ್ಯಾನ್ಸ್ ಭಾವುಕರಾಗಿ ಕಮೆಂಟ್ ಹಾಕುತ್ತಿದ್ದಾರೆ.
ಇದಲ್ಲದೆ ಪುನೀತ್ ರಾಜಕುಮಾರ್ ಅತಿಥಿಪಾತ್ರದಲ್ಲಿ ಕಾಣಿಸಿಕೊಂಡಿರುವ ಲಕ್ಕಿಮಾನ್ ಸಿನಿಮಾ ಆಗಸ್ಟ್ ನಲ್ಲಿ ತೆರೆಗೆ ಬರಲಿದೆ. ಇದಾದ ನಂತರ ಅಕ್ಟೋಬರ್ ನಲ್ಲಿ ರಿಲೀಸ್ ಆಗಲಿರುವ ಗಂಧದಗುಡಿಯೇ ಅವರ ಕೊನೆಯ ಸಿನಿಮಾವಾಗಿರಲಿದೆ. ಇದು ಥಿಯೇಟರ್ನಲ್ಲಿ ರಿಲೀಸ್ ಆಗಲಿರುವ ಪುನೀತ್ ಅವರ ಕೊನೆಯ ಚಿತ್ರ ಆಗಿರುವ ಕಾರಣಕ್ಕೆ ಫ್ಯಾನ್ಸ್ ಭಾವನಾತ್ಮಕವಾಗಿ ಕನೆಕ್ಟ್ ಆಗುತ್ತಿದ್ದಾರೆ.