ಸೂಪರ್ ಹಿಟ್ ಚಿತ್ರ ಬಿಡುಗಡೆಯಾಗಿ ಇಪ್ಪತ್ತು ವರ್ಷ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸಿದ್ದ ಸೂಪರ್ ಹಿಟ್ ಚಲನಚಿತ್ರ “ಮೆಜೆಸ್ಟಿಕ್”.
2002 ರ ಫೆಬ್ರವರಿ 8 ರಂದು ಈ ಚಿತ್ರ ಬಿಡುಗಡೆಯಾಗಿತ್ತು. ಭರ್ಜರಿ ಯಶಸ್ಸು ಕಂಡಿತ್ತು. ಪಿ.ಎನ್ ಸತ್ಯ ಈ ಚಿತ್ರ ನಿರ್ದೇಶನ ಮಾಡಿದ್ದರು.
ಈ ಚಿತ್ರ ಬಿಡುಗಡೆಯಾಗಿ ಇಪ್ಪತ್ತು ವರ್ಷ ಕಳೆದಿದೆ. ಇದೇ ಹದಿನಾರನೇ ತಾರೀಖು ದರ್ಶನ್ ಅವರ ಹುಟ್ಟುಹಬ್ಬವಿದೆ. ಈ ಸಂದರ್ಭದಲ್ಲಿ ಹೊಸ ತಂತ್ರಜ್ಞಾನದೊಂದಿಗೆ “ಮೆಜೆಸ್ಟಿಕ್” ಚಿತ್ರ ಮರು ಬಿಡುಗಡೆಯಾಗಲಿದೆ
ಎಂದು ನಿರ್ಮಾಪಕ ಎಂ.ಜಿ.ರಾಮಮೂರ್ತಿ ತಿಳಿಸಿದ್ದಾರೆ.