Karnataka Bhagya
Blogಲೈಫ್ ಸ್ಟೈಲ್

ಅಭಿಮಾನಿಗಳಿಗೆ ಮತ್ತೆ ತೆರೆ ಮೇಲೆ ಚಿರಂಜೀವಿ ಸರ್ಜಾರನ್ನ ನೋಡೋ ಅವಕಾಶ

ಅಕಾಲಿಕ‌ ಮರಣದಿಂದ ನಮ್ಮನೆಲ್ಲಾ ಅಗಲಿದ ಚಿರಂಜೀವಿ ಸರ್ಜಾ ಅಭಿನಯದ ರಾಜಮಾರ್ತಾಂಡ ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಸಿನಿಮಾ ಸೆನ್ಸಾರ್ ಮಂಡಳಿ ಮುಂದಿದ್ದು ಸದ್ಯದಲ್ಲೇ ಸೆನ್ಸಾರ್ ಮಂಡಳಿ ಚಿತ್ರವನ್ನು ವೀಕ್ಷಿಸಲಿದೆ…

ರಾಜಮಾರ್ತಾಂಡ ಸಿನಿಮಾ ಚಿರಂಜೀವಿ ಸರ್ಜಾ ಅವರ ಸಾವಿನ ಮುಂಚೆಯೇ ಚಿತ್ರೀಕರಣ ಪೂರ್ತಿಯಾಗಿತ್ತು. ಹಾಗಾಗಿ ಅವರು ಚಿತ್ರೀಕರಣ ಮುಗಿಸಿದ್ದ ಕೊನೆಯ ಚಿತ್ರ ಅನ್ನಬಹುದು.‌ ಡಬ್ಬಿಂಗ್ ಮಾಡುವುದು ಮಾತ್ರ ಬಾಕಿಯಿತ್ತು. ಚಿರು ಅವರ ಪಾತ್ರಕ್ಕೆ ಧ್ರುವ ಸರ್ಜಾ ಡಬ್ಬಿಂಗ್ ಮಾಡಲಿದ್ದಾರೆ.”ರಾಜಮಾರ್ತಾಂಡ” ಚಿತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಧ್ವನಿ ಸಹ ಕೇಳಬಹುದು.

ಜೆ.ಕೆ.ರಾಮನಾರಾಯಣ್ ಸಿನಿಮಾಗೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರವನ್ನು ಶ್ರೀ ಮಾದೇಶ್ವರ ಪ್ರೊಡಕ್ಷನ್ಸ್ ಮೂಲಕ ಪ್ರಣವ್ ಗೌಡ.ಎನ್, ನಿವೇದಿತಾ ಹಾಗೂ ಶಿವಕುಮಾರ್ ನಿರ್ಮಿಸಿದ್ದಾರೆ.

ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದು ಧರ್ಮವಿಶ್ ಹಿನ್ನೆಲೆ ಸಂಗೀತ “ರಾಜಮಾರ್ತಾಂಡ’ ನ ವೈಭವವನ್ನು ಮತ್ತಷ್ಟು ಹೆಚ್ಚಿಸಿದೆ….ಚಿರಂಜೀವಿ ಸರ್ಜಾ ಅವರಿಗೆ ನಾಯಕಿಯರಾಗಿ ದೀಪ್ತಿ‌ ಸಾತಿ, ಮೇಘಶ್ರೀ, ತ್ರಿವೇಣಿ (ಟಗರು) ಅಭಿನಯಿದ್ದಾರೆ. ಭಜರಂಗಿ ಲೋಕಿ, ಚಿಕ್ಕಣ್ಣ, ದೇವರಾಜ್, ಸುಮಿತ್ರ, ಶಂಕರ್ ಅಶ್ವಥ್, ವಿನೀತ್ ಕುಮಾರ್ (ಬಾಂಬೆ) ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Related posts

ವಿಭಿನ್ನವಾದ ಪ್ರಶಸ್ತಿ ಪಡೆದ ಹರ್ಷಿಕಾ ಪೂಣಚ್ಚ

Nikita Agrawal

ಡಿಬಾಸ್ ಮನೆಯಲ್ಲಿ ಸಂಕ್ರಾಂತಿ ಸಂಭ್ರಮ ಜೋರು

Nikita Agrawal

ವಿಚ್ಛೇದನದ ವದಂತಿಯ ಬಗ್ಗೆ ಪ್ರಿಯಾಂಕಾ ಚೋಪ್ರಾ ಉತ್ತರ

Karnatakabhagya

Leave a Comment

Share via
Copy link
Powered by Social Snap