ಸ್ಯಾಂಡಲ್ವುಡ್ನಲ್ಲಿ ವಿಭಿನ್ನ ಕಂಟೆಂಟ್ ಮೂಲಕ ಪ್ರೇಕ್ಷಕರ ಮನಗೆದ್ದ ಗರುಡ ಗಮನ ವೃಷಭ ವಾಹನ ಸಿನಿಮಾ ತೆರೆಕಂಡು ಪ್ರೇಕ್ಷಕರ ಕೈನಲ್ಲಿ ಜೈಕಾರ ಹಾಕಿಸಿಕೊಂಡಿದಾಯ್ತು…ಒಂದು ಮೊಟ್ಟೆಯ ಕಥೆ’ ಥರದ ಕಾಮಿಡಿ ಸಿನಿಮಾ ಮಾಡಿದ್ದ ರಾಜ್ ಬಿ. ಶೆಟ್ಟಿ, ಇಂಥದ್ದೊಂದು ಗ್ಯಾಂಗ್‌ಸ್ಟರ್ ಸಿನಿಮಾ ಮಾಡುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಅದರಲ್ಲೂ ಅವರು ಮಾಡಿದ್ದ ಶಿವ ಪಾತ್ರ ಸಖತ್ ರಗಡ್ ಆಗಿ ಮೂಡಿಬಂದಿತ್ತು. ರಾಜ್ ಬಿ. ಶೆಟ್ಟಿ ಮತ್ತು ರಿಷಬ್ ಶೆಟ್ಟಿ ಕಾಂಬಿನೇಷನ್ ನೋಡುಗರಿಗೆ ಇಷ್ಟವಾಗಿತ್ತು. ಇದೀಗ ಈ ಸಿನಿಮಾವನ್ನು ಟಾಲಿವುಡ್ ಖ್ಯಾತ ನಿರ್ಮಾಪಕ ದೇವ ಕಟ್ಟ ಮೆಚ್ಚುಕೊಂಡಿದ್ದಾರೆ.
ಟಾಲಿವುಡ್ ಸೇರಿದಂತೆ ಬಾಲಿವುಡ್ ಸಿನಿಮಾಗಳಿಗೆ ಆಕ್ಷನ್ ಕಟ್ ಹೇಳಿ ಸಕ್ಸಸ್ ಕಂಡಿರುವ ದೇವ ಕಟ್ಟಾ ಗರುಡ ಗಮನ ವೃಷಭ ವಾಹನ ಸಿನಿಮಾವನ್ನು ಹಾಡಿ ಹೊಗಳಿದ್ದಾರೆ.
2021ರ ಭಾರತೀಯ ಸಿನಿಮಾಗಳ ಪೈಕಿ ಅತ್ಯುತ್ತಮ ಚಲನಚಿತ್ರ ಗರಡುಗಮನ ವೃಷಭ ವಾಹನ. ನನಗೆ ಆಸ್ಕರ್ ಗೆ ಸಿನಿಮಾ ಆಯ್ಕೆ ಮಾಡುವ ಪವರ್ ಇದ್ದಿದ್ದರೇ ಈ ಸಿನಿಮಾವನ್ನು ಆಯ್ಕೆ ಮಾಡುತ್ತಿದ್ದೆ. ಗರಡು ಗಮನ ವೃಷಭ ವಾಹನ ಸಿನಿಮಾವನ್ನು ನನ್ನ ಸ್ನೇಹಿತರ ಜೊತೆ ನೋಡಿದೆ. ಫಿಲ್ಮಂ ಮೇಕಿಂಗ್ ಅದ್ಭುತವಾಗಿದೆ ಎಂದಿದ್ದಾರೆ…