Karnataka Bhagya
Blogಲೈಫ್ ಸ್ಟೈಲ್

ಸ್ಯಾಂಡಲ್ ವುಡ್ ಯುವರಾಜ’ನ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಸ್ಪೆಷಲ್ ಗಿಫ್ಟ್

ಸ್ಯಾಂಡಲ್ ವುಡ್ ಯುವರಾಜ.. ನಿಖಿಲ್ ಕುಮಾರ್ ಗೆ ಜನವರಿ 22 ರಂದು ಹುಟ್ಟುಹಬ್ಬದ ಸಂಭ್ರಮ. ಬರ್ತ್ ಡೇ ಪ್ರಯುಕ್ತ ಹೊಸ ಸಿನಿಮಾದ ಟೈಟಲ್ ಹಾಗೂ ಫಸ್ಟ್ ಲುಕ್ ರಿಲೀಸ್ ಆಗಲಿದೆ. ಕೆವಿಎನ್ ಪ್ರೊಡಕ್ಷನ್ ನಡಿ ಅದ್ಧೂರಿಯಾಗಿ ತಯಾರಾಗ್ತಿರುವ..ನಿಖಿಲ್ ನಟಿಸ್ತಿರುವ ಐದನೇ ಸಿನಿಮಾದ ಶೀರ್ಷಿಕೆ ಹಾಗೂ ಫಸ್ಟ್ ಲುಕ್ ರಿಲೀಸ್ ಮಾಡಲು ಚಿತ್ರತಂಡ ಸಕಲ ರೀತಿಯಿಂದ ಸಜ್ಜಾಗಿದೆ.

ಸಂಕ್ರಾಂತಿ ಹಬ್ಬ ಮುಗಿಸಿಕೊಂಡು ಶೂಟಿಂಗ್ ಅಖಾಡಕ್ಕೆ ಧುಮುಕಿದ್ದ ಯುವರಾಜನ ಹೊಸ ಸಿನಿಮಾಗೆ ಮಂಜು ಅಥರ್ವ ಆಕ್ಷನ್ ಕಟ್ ಹೇಳ್ತಿದ್ದಾರೆ.
ಕಳೆದ ಏಳು ವರ್ಷಗಳಿಂದ ಮಂಜು ಅಥರ್ವ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಮಂಜು, ತಮಿಳಿನ ಕದಿರನ್ ಜೊತೆ ಕೆಲಸ ಮಾಡಿದ್ದಾರೆ. ಮಾಸ್ಟರ್‌ಪೀಸ್‌, ‘ಮಫ್ತಿ’ ಸಿನಿಮಾಗಳಿಗೆ ಸಹಾಯಕ ನಿರ್ದೇಶಕನಾಗಿ ಆಗಿ ಕೆಲಸ ಮಾಡಿದ್ದಾರೆ. ನೆನಪಿರಲಿ ಪ್ರೇಮ್‌ ಅವರ 25ನೇ ಸಿನಿಮಾ ‘ಪ್ರೇಮಂ ಪೂಜ್ಯಂ’ ಸಿನಿಮಾಗೆ ಕೋ-ಡೈರೆಕ್ಟರ್‌ ಕೂಡ ಆಗಿದ್ದರು. ಇದೀಗ ಮಂಜು ಅಥರ್ವ, ನಿಖಿಲ್‌ ಅವರ ಸಿನಿಮಾ ಮೂಲಕ ನಿರ್ದೇಶಕರಾಗಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ಚಿತ್ರದ ಪಾತ್ರಗಳು ಫೈನಲ್ ಆಗಿಲ್ಲ. ಚಿತ್ರಕ್ಕೆ ಅಜನೀಶ್ ಲೋಕನಾಥ್‌ ಸಂಗೀತ ನೀಡುತ್ತಿದ್ದಾರೆ. ಮಫ್ತಿ, ಮದಗಜ ಸಿನಿಮಾಗಳ ಸಿನಿಮಾಟೋಗ್ರಾಫರ್ ನವೀನ್ ಕ್ಯಾಮೆರಾ ಕೈ ಚಳಕ ಸಿನಿಮಾದಲ್ಲಿರಲಿದೆ. ಸದ್ಯಕ್ಕೆ ಶೂಟಿಂಗ್ ಗೆ ಕಿಕ್ ಸ್ಟಾರ್ಟ್ ನೀಡಿರುವ ಚಿತ್ರ ತಂಡ ಸದ್ಯದಲ್ಲಿಯೇ ಟೈಟಲ್ ಜೊತೆಗೆ ಉಳಿದ ತಾರಾಬಳಗದ ಬಗ್ಗೆ ಮಾಹಿತಿ‌ ಹೊರ ಬೀಳಲಿದೆ.

Related posts

ವರ್ಕೌಟ್ ಚಿತ್ರಗಳನ್ನು ಹಂಚಿಕೊಂಡಿರುವ ಕಾಜಲ್

Nikita Agrawal

ಅಭಿಮಾನಿಗಳಿಗೆ ವಿಭಿನ್ನ ಖುಷಿ ನೀಡಿದ ಕಿಚ್ಚ ಸುದೀಪ್

Nikita Agrawal

ಲಕ‌-ಲಕ ಲಂಬರ್ಗಿನಿ ಸಾಂಗ್ ರಿಲೀಸ್ / ಫ್ಯಾನ್ಸ್ ರೆಸ್ಪಾನ್ಸ್ ಹೀಗಿದೆ

Nikita Agrawal

Leave a Comment

Share via
Copy link
Powered by Social Snap