ಸ್ಯಾಂಡಲ್ ವುಡ್ ನಟ ನಿರ್ದೇಶಕ ರಾಜ್ ಬಿ ಶೆಟ್ಟಿಗೆ ‘RGV’ ಶಹಬ್ಬಾಸ್ ಗಿರಿ ಸಿಕ್ಕಿದೆ…ಗರುಡ ಗಮನ ವೃಷಭ ವಾಹನ ಸಿನಿಮಾ ನೋಡಿದ ರಾಮ್ ಗೋಪಾಲ್ ಫಿದಾ ಆಗಿದ್ದಾರೆ…
ರಾಜ್ ಬಿ ಶೆಟ್ಟಿಗೆ ಮತ್ತು ರಿಷಬ್ ಶೆಟ್ಟಿ ಅಭಿನಯದ ‘ಗರುಡ ಗಮನ ವೃಷಭ ವಾಹನ’ ಸಿನಿಮಾ ಈಗಾಗಲೇ ಓಟಿಟಿ ಪ್ಲ್ಯಾಟ್ ಫಾರ್ಮ್‌ನಲ್ಲಿ ಇತಿಹಾಸ ಸೃಷ್ಟಿಸ್ತಿದೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ ಒಟಿಟಿಗೆ ಎಂಟ್ರಿ ಕೊಟ್ಟ ಈ ಸಿನಿಮಾ ಮೂರೇ ದಿನದಲ್ಲಿ ಬರೋಬ್ಬರಿ 8 ಕೋಟಿ ನಿಮಿಷ ವೀಕ್ಷಣೆ ಕಂಡಿದೆ.
ಇದೀಗ ಈ ಸಿನಿಮಾವನ್ನು ಸ್ಟಾರ್ ನಿರ್ದೇಶಕ ರಾಮ್ ಗೋಪಾಲ್ ವರ್ಮ ನೋಡಿ ಮೆಚ್ಚಿಕೊಂಡಿದ್ದಾರೆ.
ಗರುಡ ಗಮನ ವೃಷಭ ವಾಹನ ಸಿನಿಮಾ ಚಿತ್ರಪ್ರೇಮಿಗಳು ಮಾತ್ರವಲ್ಲದೆ ಸಿನಿಮಾರಂಗದ ಸೆಲೆಬ್ರಿಟಿಗಳಿಗೂ ಇಷ್ಟವಾಗಿತ್ತುಮ..ಈಗ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರ ಮನಸೂರೆಗೊಳಿಸಿದೆ. ಇಡೀ ಸಿನಿಮಾಕ್ಕೆ ಫಿದಾ ಆಗಿರುವ ಆರ್ ಜಿವಿ ನಿರ್ದೇಶಕ ರಾಜ್ ಬಿ ಶೆಟ್ಟಿಗೆ ಶಹಬ್ಬಾಸ್ಗಿರಿ ಕೊಟ್ಟಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ರಾಮ್ ಗೋಪಾಲ್ ವರ್ಮಾ, ಚಿತ್ರವನ್ನು, ರಾಜ್ ಬಿ ಶೆಟ್ಟಿ ಅಭಿನಯವನ್ನು ಪದಗಳಲ್ಲಿ ಬಣ್ಣಿಸಿದ್ದಾರೆ. ಸಿನಿಮಾ ಮತ್ತೊಂದು ಲೆವೆಲ್ನಲ್ಲಿದೆ. ರಾಜ್ ಬಿ ಶೆಟ್ಟಿ ಪಾತ್ರಕ್ಕೆ ತಮ್ಮನ್ನು ತಾವು ಅರ್ಪಿಸಿಕೊಂಡಿದ್ದಾರೆ. ಈ ಮೂಲಕ ಅವರು ಸಂಪೂರ್ಣ ರೂಪಾಂತರ ಹೊಂದಿದ್ದಾರೆ ಎಂದಿರುವ ಆರ್ಜಿವಿ, ಇಡೀ ಚಿತ್ರ ‘ಅಲ್ಟ್ರಾಸ್ಕೋಪಿಕ್’ ಎಂದು ಹಾಡಿ ಹೊಗಳಿದ್ದಾರೆ
ರಾಮ್ ಗೋಪಾಲ್ ವರ್ಮಾಗೂ ಮೊದಲೇ ಬಾಲಿವುಡ್ ನ ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ ಗರುಡ ಗಮನ ವೃಷಭ ವಾಹನ ಸಿನಿಮಾವನ್ನು ಇಷ್ಟಪಟ್ಟಿದ್ದರು. ಇದೀಗ RGV ಕೂಡ ರಾಜ್ ಸಿನಿಮಾಗೆ ಫಿದಾ ಆಗಿದ್ದಾರೆ.