ನಟ ಶಿವರಾಮ್ ಅವರು ಕನ್ನಡಿಗರ ಮನದಲ್ಲಿ ಹಚ್ಚಾಗಿರುವ ನಟ. ಅದ್ಭುತ ನಟನೆಯಿಂದ ಅಂದಿನಿಂದ ಇಂದಿನವರೆಗೂ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ.ನೂರಾರು ಸಿನಿಮಾಗಳಲ್ಲಿ ಅಭಿನಯಿಸಿ ಜನಾನುರಾಗಿಯಾಗಿದ್ದಾರೆ.
3 ದಿನದ ಹಿಂದೆ ಕಾರಿನಲ್ಲಿ ತೆರಳುವಾಗ ಅವರಿಗೆ ಅಪಘಾತವಾಗಿತ್ತು. ತಲೆಗೆ ತೀವ್ರ ಪೆಟ್ಟು ಬಿದ್ದಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು.
ಇದೀಗ ಮತ್ತೆ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.ಅವರನ್ನು ಹೊಸಕೆರೆ ಹಳ್ಳಿಯ ಬಳಿಯ ಒಂದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಐಸಿಯು ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಬಹು ಬೇಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಅವರು ಆರೋಗ್ಯವಾಗಿ ಮನೆಗೆ ವಾಪಸಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಷ್ಟೇ ನಮ್ಮ ಕೈಯಲ್ಲಿರುವುದು.