Karnataka Bhagya
ಹೋಮ್

ಬಂದಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ೨೦೨೪ ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲ ಬಿ ಚಾಲನೆ

ಬಂದಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ೨೦೨೪ ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲ ಬಿ ಚಾಲನೆ

ಕರ್ನಾಟಕ ಭಾಗ್ಯ ವಾರ್ತೆ

ಯಾದಗಿರಿ : ಮಕ್ಕಳಿಗೆ ಉತ್ತಮ ಶಿಕ್ಷಣ ಕೊಟ್ಟಾಗ ಮಾತ್ರ ಅವರ ಭವಿಷ್ಯ ಉಜ್ವಲವಾಗಲು ಸಾಧ್ಯವಾಗುತ್ತದೆ. ಹೀಗಾಗಿ  ಪ್ರಾಥಮಿಕ ಹಂತದಿAದಲೇ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಬೋಧಿಸಬೇಕು ಎಂದು  ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ತಾಲೂಕಿನ ಬಂದಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ೨೦೨೪ ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಹಾಗೂ ನೂತನ ಪೂರ್ವ ಪ್ರಾಥಮಿಕ, ಎಲ್. ಕೆ. ಜಿ- ಯುಕೆಜಿ ತರಗತಿಯನ್ನು  ಉದ್ಘಾಟಿಸಿ ಅವರು ಮಾತನಾಡಿದರು.

ಬೇಸಿಗೆ ರಜೆಗಳು  ಕಳೆದು  ಶಾಲೆಗಳು ಪುನರಾರಂಭ ಆಗಿದ್ದು,  ಶಾಲೆಗೆ  ದಾಖಲಾಗುವ ಮಕ್ಕಳು ಕಲಿಕೆಯಿಂದ ಹೊರಗುಳಿಯದಂತೆ ಎಲ್ಲಾ ಮಕ್ಕಳನ್ನು ಶಾಲೆಗೆ ಕಳುಹಿಸುವಂತೆ ಮಕ್ಕಳ ಪಾಲಕರಿಗೆ ತಿಳಿ ಹೇಳಬೇಕು. ಮಗುವಿನ ಸರ್ವಾಂಗೀಣ ವ್ಯಕ್ತಿತ್ವದ ಬೆಳವಣಿಗೆಯ ಹಿತ ದೃಷ್ಟಿಯಿಂದ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳನ್ನು ರೂಪಿಸಿಕೊಂಡು ಪರಿಣಾಮಕಾರಿ ಕಲಿಕೆಗೆ ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ನುಡಿದರು.

ಈ ಸಂದರ್ಭದಲ್ಲಿ ಡಿಡಿಪಿಐ ಮಂಜುನಾಥ, ಬಿಆರ್ಸಿ ಮಲ್ಲಿಕಾರ್ಜುನ ಪೂಜಾರಿ, ಹೊನಗೇರಾ ಕ್ಲಸ್ಟರ್ ಸಿಆರ್ಸಿ ಕೃಷ್ಣಾರೆಡ್ಡಿ, ಸಹ ಶಿಕ್ಷಕಿಯರಾದ ಹುಸ್ನಾರ, ಸುರೇಖ ಹಾಗೂ ಎಲ್ಲಾ ಶಿಕ್ಷಕ ವೃಂದದವರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಬಂದಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ೨೦೨೪ ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲ ಬಿ ಚಾಲನೆ

Related posts

ಮಳೆಯಿಂದ ಹಾನಿಗೊಳಗಾದ ನಗರದ ವಿವಿಧ ವಾರ್ಡ್ಗಳಿಗೆ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್ ಭೇಟಿ

Mahesh Kalal

ಯಾದಗಿರಿ ನಗರದ ಆರ್ಯಭಟ್ಟ ಅಂತರರಾಷ್ಟಿçÃಯ ಶಿಕ್ಷಣ ಸಂಸ್ಥೆಯಲ್ಲಿ ಜಿಲ್ಲೆಯ ಪ್ರಾಥಮಿಕ, ಪ್ರೌಢಶಾಲಾ ವಿಜ್ಞಾನ ಶಿಕ್ಷಕರಿಗೆ ಭೌತ ಮತ್ತು ಜೀವ ವಿಜ್ಞಾನ ವಿಷಯದ ಕುರಿತು ೩ ದಿನಗಳ ಕಾರ್ಯಾಗಾರದ ಸಮಾರಂಭದಲ್ಲಿ ಪದ್ಮಶ್ರೀ ಭೌತಶಾಸ್ತçಜ್ಞ ಪ್ರೊ. ಹೆಚ್.ಸಿ ವರ್ಮಾ ಉಪನ್ಯಾಸ

Mahesh Kalal

ಸಂಚಲನ ಮೂಡಿಸಿದ ಶಾಸಕ ಆರ್‌ವಿಎನ್ ಹುಣಸಗಿ; ಭೇಟಿ, ಖುಷಿಯಾದ ಜನರಿಂದ ಬಂದ ಬೇಡಿಕೆಗಳು

Karnataka Bhagya

Leave a Comment

Share via
Copy link
Powered by Social Snap